Publish Date: Sat, 20 Nov 2021 (11:20 IST)
Updated Date: Sat, 20 Nov 2021 (11:22 IST)
ಕರ್ನಾಟಕ, ಆಂಧ್ರಪ್ರದೇಶ, ಕೇರಳ ಮತ್ತು ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ವಾಹನ ಸವಾರರು ರಸ್ತೆಯಲ್ಲಿ ಪರದಾಡುತ್ತಿದ್ದಾರೆ.
ಆಂಧ್ರಪ್ರದೇಶದಲ್ಲಿ ಶುಕ್ರವಾರ ಸುರಿದ ಭಾರೀ ಮಳೆಗೆ ಸುಮಾರು 17 ಜನ ಅಸುನೀಗಿದ್ದಾರೆ. ಅಲ್ಲದೇ ಸುಮಾರು 100ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಈಗಾಗಲೇ ಎನ್ಡಿಆರ್ಎಫ್ ತಂಡ ತನ್ನ ಕಾರ್ಯನಿರ್ವಹಿಸುತ್ತಿದೆ. ಇನ್ನು ಕೇರಳದಲ್ಲೂ ವರುಣಾರ್ಭಟ ಜೋರಾಗಿದೆ. ಪಂಪಾ ನದಿ ಸೇರಿ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಈ ಹಿನ್ನೆಲೆ ಶಬರಿಮಲೆಯ ಪ್ರಸಿದ್ಧ ಅಯ್ಯಪ್ಪ ದೇವಾಲಯಕ್ಕೆ ಇಂದಿನ ಯಾತ್ರೆ ಸ್ಥಗಿತವಾಗಿದೆ.