Publish Date: Wed, 29 Mar 2023 (13:12 IST)
Updated Date: Wed, 29 Mar 2023 (14:15 IST)
ನವದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಮೇ 10 ರಂದು ಚುನಾವಣೆ ನಡೆಯಲಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್, ಏಪ್ರಿಲ್ 13ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದಾರೆ.
ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 21 ನಾಮಪತ್ರ ಪರಿಶೀಲನೆ ನಡೆಲಿದ್ದು, ಏಪ್ರಿಲ್ 24 ನಾಮಪತ್ರ ವಾಪಸ್ಸಿಗೆ ಕೊನೆಯ ದಿನವಾಗಿದೆ. ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಅಲ್ಲದೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ ಎಂದರು.