ಬೆಂಗಳೂರು : ಮೊದಲು ಜೆಡಿಎಸ್ ಪಕ್ಷ ಸೇರುವ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಟ್ಟ ನಟಿ ಪೂಜಾ ಗಾಂಧಿ ಅವರು ನಂತರ ಜೆಡಿಎಸ್ ಪಕ್ಷ ತೊರೆದು ಪಕ್ಷದಿಂದ ಪಕ್ಷಕ್ಕೆ ಹಾರುತ್ತಾ ಬಂದು ಇದೀಗ ಕೊನೆಗೆ ಮತ್ತೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಪಿಜಿಆರ್ ಸಿಂಧ್ಯ ನೇತೃತ್ವದಲ್ಲಿ ನಟಿ ಪೂಜಾ ಗಾಂಧಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ ಮೊದಲು ದೇವೇಗೌಡ ಹಾಗೂ ಕುಮಾರಸ್ವಾಮಿ ಅವರಿಗೆ ಕ್ಷಮೆ ಕೇಳುತ್ತೇನೆ. ತಪ್ಪು ನಿರ್ಧಾರ ತೆಗೆದುಕೊಂಡು ಪಕ್ಷದಿಂದ ಹೊರಗೆ ಹೋಗಿದ್ದೆ. ಮತ್ತೆ ನನ್ನ ಮನೆಗೆ ಸೇರಿದ್ದೇನೆ. ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ. ಟಿಕೆಟ್ ಕೂಡ ಬೇಡ. ಸಾಮಾನ್ಯ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತೇನೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ