ರಾಜ್ಯದಲ್ಲಿ ಪಾಸಿಟಿವಿಟಿ ದರ ಏರಿಕೆ !

Webdunia
ಭಾನುವಾರ, 12 ಜೂನ್ 2022 (16:03 IST)
ಬೆಂಗಳೂರು : ರಾಜ್ಯದಲ್ಲಿ ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆಯಾಗಿದೆ. ನಿನ್ನೆ ಶೇ.2.07 ರಷ್ಟಿದ್ದ ಪಾಸಿಟಿವಿಟಿ ದರ ಇಂದು ಶೇ.2.15ಕ್ಕೆ ಏರಿಕೆಯಾಗಿದೆ.

463 ಹೊಸ ಸೋಂಕಿನ ಪ್ರಕರಣಗಳು ಕಂಡುಬಂದಿದ್ದು, ಬೆಂಗಳೂರು ನಗರದಲ್ಲೇ 429 ಪ್ರಕರಣಗಳು ವರದಿಯಾಗಿದೆ. ಇಂದು ಬೆಂಗಳೂರು ನಗರದಲ್ಲಿ 429 ಪ್ರಕರಣ ದಾಖಲಾಗಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 3,651ಕ್ಕೆ ಏರಿಕೆ ಕಂಡಿದೆ.

ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 2.15ಕ್ಕೆ ಏರಿಕೆ ಕಂಡಿದೆ. ಆದರೆ ಇಂದು ಸಹ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ.  ಇಂದು 199 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,066 ಮರಣ ಪ್ರಕರಣ ಪತ್ತೆಯಾಗಿದೆ. 

ಈವರೆಗೆ ರಾಜ್ಯದಲ್ಲಿ ಬೆಂಗಳೂರು ನಗರದಲ್ಲಿ 429 ಪ್ರಕರಣ ಹೊರತುಪಡಿಸಿ, ದಕ್ಷಿಣ ಕನ್ನಡದಲ್ಲಿ 14, ದಾವಣಗೆರೆಯಲ್ಲಿ 2, ಧಾರವಾಡದಲ್ಲಿ 4, ಉಡುಪಿಯಲ್ಲಿ 3, ಉತ್ತರ ಕನ್ನಡದಲ್ಲಿ 6 ಹಾಗೂ ಬಳ್ಳಾರಿ, ಚಿತ್ರದುರ್ಗ, ಗದಗ, ಹಾಸನ, ರಾಯಚೂರು ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣಗಳು ಕಂಡುಬಂದಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬನ್ನಿ ಚರ್ಚೆ ಮಾಡೋಣ.. ಎಂದು ಆಹ್ವಾನ ಕೊಟ್ಟ ಕುಮಾರಸ್ವಾಮಿ, ನಾನು ರೆಡಿ ಎಂದು ಡೇಟ್ ಕೊಟ್ಟ ಡಿಕೆಶಿ

2023 ಸಿಎಂ ಬದಲಾವಣೆ ಗುಟ್ಟು ಕೊನೆಗೂ ಬಹಿರಂಗವಾಗಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಯೆಲ್ಲೊ ಅಲರ್ಟ್

ಕತಾರ್‌ನ ಅನಿಲ ಸಂಸ್ಕರಣಾ ಘಟಕದಲ್ಲಿ ಭೀಕರ ಸ್ಫೋಟ, ಹದಿಮೂರು ಸಾವು, ಹೆಚ್ಚಿನವರು ಭಾರತೀಯರು

ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡುವುದು ಹೊಸದೇನಲ್ಲ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments