Webdunia - Bharat's app for daily news and videos

Install App

ಒಬಿಸಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕಾರ

Webdunia
ಶುಕ್ರವಾರ, 20 ಆಗಸ್ಟ್ 2021 (10:21 IST)
ನವದೆಹಲಿ: ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿ ಸೂಚಿಸುವ ಅಧಿಕಾರಗಳನ್ನು ರಾಜ್ಯಗಳಿಗೆ ಹಿಂತಿರುಗಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಹಾಕಿದ್ದಾರೆ.

ಸಂವಿಧಾನದ 105 ನೇ ತಿದ್ದುಪಡಿಯ ಈ ಮಸೂದೆಯನ್ನು ಒಬಿಸಿ ಮಸೂದೆಯೆಂದೇ ಹೇಳಲಾಗುತ್ತದೆ. ಆ.11 ರಂದು ಸಂಸತ್ ನಲ್ಲಿ ಮಸೂದೆಯನ್ನು ಅಂಗೀಕರಿಸಲಾಗಿತ್ತು.
ಕಾನೂನು ಮತ್ತು ನ್ಯಾಯ ಸಚಿವಾಲಯ ಪ್ರಕಟಿಸುವ ಗೆಝೆಟ್ ನ ಪ್ರಕಾರ ಈ ಕಾಯ್ದೆ ಸಂವಿಧಾನದ ಉಪವಾಕ್ಯ (clause 9) ಅಡಿಯಲ್ಲಿನ ಆರ್ಟಿಕಲ್ 338 ಬಿಯನ್ನು ತಿದ್ದುಪಡಿ ಮಾಡಲಿದೆ ಎಂದು ಹೇಳಿತ್ತು.
ಈ ತಿದ್ದುಪಡಿಯ ಮೂಲಕ ಪ್ರತಿ ರಾಜ್ಯ ಹಾಗೂ ಕೇಂದ್ರಾಡಳಿತ ಕಾನೂನು ಸಮ್ಮತವಾಗಿ ಸಾಮಾಜಿಕ ಹಾಗೂ ಶೈಕ್ಷಣಿಕ ಹಿಂದುಳಿದ ವರ್ಗಗಳನ್ನು ಗುರುತಿಸಿ ಪಟ್ಟಿ ಸಿದ್ಧಪಡಿಸುವ ಅಧಿಕಾರವನ್ನು ಪಡೆಯಲಿದ್ದು ಕೇಂದ್ರದ ಪಟ್ಟಿಗಿಂತಲೂ ಭಿನ್ನವಾದ ಪಟ್ಟಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಸಂಸತ್ ನ ಉಭಯ ಸದನಗಳಲ್ಲೂ ಒಬಿಸಿ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದ್ದನ್ನು ಶ್ಲಾಷಿಸಿದ ಪ್ರಧಾನಿ ನರೇಂದ್ರ ಮೋದಿ ದೇಶದ ಪಾಲಿನ ಹೆಗ್ಗುರುತಿನ ಕ್ಷಣ ಎಂದು ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments