ಬೆಂಗಳೂರು: ಇಂದು ಆರೋಗ್ಯ ತಪಾಸಣೆಗೆಂದು ಖಾಸಗಿ ಆಸ್ಪತ್ರೆಗೆ ಹೋಗುವವರಿದ್ದರೆ ಪ್ಲ್ಯಾನ್ ಬದಲಾಯಿಸುವುದೇ ಒಳ್ಳೆಯದು. ಯಾಕೆಂದರೆ ಇಂದು ಸಂಜೆ 6 ಗಂಟೆಯವರೆಗೆ ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತರಲುದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ ಎಂಸಿ) ವಿದೇಯಕ ವಿರೋಧಿಸಿ 2 ಲಕ್ಷಕ್ಕೂ ಅಧಿಕ ಖಾಸಗಿ ವೈದ್ಯರು ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮುಷ್ಕರ ನಡೆಯಲಿದೆ. ಹೊರ ರೋಗಿಗಳ ವಿಭಾಗ ಬಂದ್ ಮಾಡಿ ಪ್ರತಿಭಟನೆ ನಡೆಸಲು ವೈದ್ಯರು ತೀರ್ಮಾನಿಸಿದ್ದಾರೆ. ಆದರೆ ತುರ್ತು ಸೇವಾ ವಿಭಾಗಗಳು ಮತ್ತು ಒಳ ರೋಗಗಿಳ ಸೇವೆ ಮುಂದುವರಿಯಲಿದೆ. ಆದರೆ ಸರ್ಕಾರಿ ವೈದ್ಯರು ಎಂದಿನಂತೆ ಕರ್ತವ್ಯ ನಿರ್ವಹಿಸಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.