Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮತಾಂತರ ನಿಷೇಧ ಕಾಯ್ದೆ ಜಾರಿ

ಮತಾಂತರ ನಿಷೇಧ ಕಾಯ್ದೆ ಜಾರಿ
ಬೆಂಗಳೂರು , ಬುಧವಾರ, 18 ಮೇ 2022 (09:15 IST)
ಬೆಂಗಳೂರು : ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಅಧಿಕೃತವಾಗಿ ಜಾರಿಯಾಗಿದೆ.
 
ಕಳೆದ ವಾರ ನಡೆದ ಕ್ಯಾಬಿನೆಟ್ ನಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದು, ಇದೀಗ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆ ಪಡೆದಿತ್ತು. ಆದರೆ ಪರಿಷತ್ ನಲ್ಲಿ ಬಹುಮತ ಇಲ್ಲದ್ದಕ್ಕೆ ಕಾಯ್ದೆ ಮಂಡನೆಯನ್ನು ಸರ್ಕಾರ ಮುಂದೂಡಿತ್ತು. ಈ ಬಾರಿ ಬಜೆಟ್ ಅಧೀವೇಶದಲ್ಲಿ ಕೂಡ ಸರ್ಕಾರ ಮಂಡನೆ ಮಾಡಿರಲಿಲ್ಲ.

ಸಂಪುಟ ಅನುಮೋದನೆ ಪಡೆದು ರಾಜ್ಯಪಾಲರಿಗೆ ಸುಗ್ರಿವಾಜ್ಞೆ ಹೊರಡಿಸುವಂತೆ ಶಿಫಾರಸು ಮಾಡಲಾಗಿತ್ತು. ಇದೀಗ ರಾಜ್ಯಪಾಲರ ಅಂಕಿತ ಹಾಕಿದ್ದು, ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಅಧಿಕೃತವಾಗಿ ಜಾರಿಗೆ ಬಂದಿದೆ. 

ಕಾಯ್ದೆಯಲ್ಲಿ ಏನಿದೆ?
* ಬಲವಂತದ ಮತಾಂತರ ಜಾಮೀನುರಹಿತ ಅಪರಾಧ ಮತ್ತು ಅಸಿಂಧು
* ಉಡುಗೊರೆ, ಕೆಲಸ, ಉಚಿತ ಶಿಕ್ಷಣ, ವಿವಾಹದ ಆಮಿಷ ಒಡ್ಡಿ ಮತಾಂತರ ಮಾಡುವಂತಿಲ್ಲ.
* ಅಮಿಷ ಒಡ್ಡಿ ಮತಾಂತರಗೊಂಡು ವಿವಾಹ ಆಗಿದ್ದರೆ ಆ ಮದುವೆ ಅಸಿಂಧು
* ಮತಾಂತರದಲ್ಲಿ ಶಿಕ್ಷಣ ಸಂಸ್ಥೆ, ಆಶ್ರಮ, ಧಾರ್ಮಿಕ ಮಿಷನರಿ, ಎನ್ಜಿಓಗಳು ಪಾಲ್ಗೊಳ್ಳುವಂತಿಲ್ಲ.
* ಸಾಮೂಹಿಕ ಮತಾಂತರದಲ್ಲಿ ಭಾಗಿಯಾದ ಸಂಸ್ಥೆಗಳಿಗೆ ಸರ್ಕಾರದ ಅನುದಾನ ಸ್ಥಗಿತ
* ಧರ್ಮ ಬದಲಿಸುವ 60 ದಿನ ಮೊದಲು ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಬೇಕು.
* ಮತಾಂತರಗೊಂಡ ಎಸ್ಸಿ, ಎಸ್ಟಿ ವ್ಯಕ್ತಿಗಳಿಗೆ ಸಿಗುವ ಮೀಸಲಾತಿ,ಇತರೆ ಸೌಲಭ್ಯ ರದ್ದು

ದಂಡ ಮತ್ತು ಶಿಕ್ಷೆ

* ಎಸ್ಸಿ,ಎಸ್ಟಿ ಸಮುದಾಯದವರನ್ನು ಬಲವಂತವಾಗಿ ಮತಾಂತರ ಮಾಡುವಂತಿಲ್ಲ
* ಅಪ್ರಾಪ್ತರು, ಮಹಿಳೆಯರು, ಬುದ್ದಿಮಾಂಧ್ಯರಿಗೆ ಆಸೆ, ಆಮಿಷ ಒಡ್ಡಿ ಮತಾಂತರ ಮಾಡಬಾರದು.
* ಕಾಯ್ದೆ ಉಲ್ಲಂಘಿಸಿದಲ್ಲಿ ಕನಿಷ್ಠ 3ರಿಂದ 10 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ.
* ಇತರರನ್ನು ಬಲವಂತವಾಗಿ ಮತಾಂತರಿಸಿದ್ದಲ್ಲಿ 3 ರಿಂದ 5 ವರ್ಷ ಜೈಲು ಶಿಕ್ಷೆ, 25 ಸಾವಿರ ರೂ. ದಂಡ.
* ಸಾಮೂಹಿಕ ಮತಾಂತರ ಮಾಡಿದವರಿಗೆ 3ರಿಂದ 10 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ.
* ಬಲವಂತದ ಮತಾಂತರ ಸಾಬೀತಾದಲ್ಲಿ ಮತಾಂತರಕ್ಕೆ ಒಳಗಾದವನಿಗೆ ಗರಿಷ್ಠ 5 ಲಕ್ಷ ಪರಿಹಾರ
* ಪರಿಹಾರದ ಮೊತ್ತವನ್ನು ಮತಾಂತರ ಮಾಡಿದವನಿಂದಲೇ ವಸೂಲಿ
* ಈ ಹಿಂದೆಯೂ ಮತಾಂತರ ಮಾಡಿದ್ದು ಸಾಬೀತಾದಲ್ಲಿ ದುಪ್ಪಟ್ಟು ದಂಡ ವಿಧಿಸಲಾಗುವುದು.


Share this Story:

Follow Webdunia kannada

ಮುಂದಿನ ಸುದ್ದಿ

ಸದ್ಯದಲ್ಲಿಯೇ ಟೋಯಿಂಗ್ ಆರಂಭ?