Daily Horoscope
✕

ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮಳೆ

Webdunia
ಶನಿವಾರ, 23 ಅಕ್ಟೋಬರ್ 2021 (14:55 IST)
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ  ಕುಸಿತ ಹಿನ್ನೆಲೆಯಲ್ಲಿ  ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ. 
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಅ.  23ರಂದು ಹೆಚ್ಚು ಮಳೆ ಬೀಳುವ ಸಂಭವವಿದೆ. ಅ. 1 ರಿಂದ 20ರವರೆಗೆ ನಗರದಲ್ಲಿ 209 ಮಿ.ಮೀ. ಮಳೆ ಸುರಿದಿದ್ದು, ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನಗರದ ರಸ್ತೆಗಳು ಗುಂಡಿ ಬಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ.
ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್
ಈ ವಾರ ಕರಾವಳಿಯಲ್ಲಿ ಭರ್ಜರಿ ಮಳೆಯಾಗಿದೆ. ಇಂದು ಯೆಲ್ಲೋ ಅಲರ್ಟ್ ಇರಲಿದ್ದು, ಸಾಧಾರಣದಿಂದ ಭಾರೀ ಮಳೆ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದ ಲಕ್ಷ ದ್ವೀಪ ಭಾಗದಲ್ಲಿ ಹಾಗೂ ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮಳೆಗೆ ಮೂಲ ಕಾರಣ ಎನ್ನಲಾಗುತ್ತಿದೆ. ಇದರ ಜತೆಯಲ್ಲಿ ಒಂದು ವಾರದ ಬಳಿಕ ಮುಂಗಾರು ಮಳೆ ಕಡಿಮೆಯಾಗಿ ರಾಜ್ಯಕ್ಕೆ ಹಿಂಗಾರು ಪ್ರವೇಶ ಪಡೆಯಲಿದೆ ಎನ್ನುವುದು ಇಲಾಖೆಯ ಲೆಕ್ಕಾಚಾರ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments