ಮಂಗಳೂರು: ದ.ಕ. ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದ್ದ ಮಳೆಗೆ ಇಂದು ಕೊಂಚ ಬಿಡುವು ಸಿಕ್ಕಿದೆ. ಹೀಗಾಗಿ ಶಾಲಾ, ಕಾಲೇಜುಗಳು ಇಂದು ಪುನರಾರಂಭಗೊಂಡಿವೆ.
ಕಳೆದ ನಾಲ್ಕು ದಿನದಿಂದ ಬಿಡುವಿಲ್ಲದೇ ಮಳೆ ಸುರಿಯುತ್ತಿದ್ದ ಕಾರಣ ಜಿಲ್ಲೆಯಾದ್ಯಂತ ಪ್ರವಾಹ ಸದೃಶ ವಾತಾವರಣವಿತ್ತು. ಇದೇ ಕಾರಣಕ್ಕೆ ಕಳೆದ ನಾಲ್ಕು ದಿನಗಳಿಂದ ಶಾಲಾ, ಕಾಲೇಜುಗಳು ತೆರೆದಿರಲಿಲ್ಲ.
ಇಂದು ಮೋಡ ಕವಿದ ವಾತಾವರಣವಿದ್ದು ತುಂತುರು ಮಳೆಯಾಗುತ್ತಿದೆ. ಹೀಗಾಗಿ ಶಾಲಾ ಕಾಲೇಜು ಪುನರಾರಂಭಗೊಂಡಿದೆ. ಆದರೆ ಪರಿಸ್ಥಿತಿ ನೋಡಿಕೊಂಡು ರಜೆ ನೀಡುವ ಅಧಿಕಾರವನ್ನು ಆಯಾ ಶಿಕ್ಷಣ ಸಂಸ್ಥೆಗಳಿಗೆ ನೀಡಲಾಗಿದೆ.
ಇನ್ನೂ ಎರಡು ಮೂರು ದಿನ ರಾಜ್ಯದಾದ್ಯಂತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ, ಜುಲೈ 14 ರವರೆಗೂ ಕೊಡಗು, ಕರಾವಳಿ ಭಾಗದಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.