ಕರಾವಳಿಯಲ್ಲಿ ಮಳೆಗೆ ಇಂದು ಕೊಂಚ ಬಿಡುವು, ಅಂತೂ ಶಾಲೆ ಶುರು!

Webdunia
ಮಂಗಳವಾರ, 10 ಜುಲೈ 2018 (08:56 IST)
ಮಂಗಳೂರು: ದ.ಕ. ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದ್ದ ಮಳೆಗೆ ಇಂದು ಕೊಂಚ ಬಿಡುವು ಸಿಕ್ಕಿದೆ. ಹೀಗಾಗಿ ಶಾಲಾ, ಕಾಲೇಜುಗಳು ಇಂದು ಪುನರಾರಂಭಗೊಂಡಿವೆ.

ಕಳೆದ ನಾಲ್ಕು ದಿನದಿಂದ ಬಿಡುವಿಲ್ಲದೇ ಮಳೆ ಸುರಿಯುತ್ತಿದ್ದ ಕಾರಣ ಜಿಲ್ಲೆಯಾದ್ಯಂತ ಪ್ರವಾಹ ಸದೃಶ ವಾತಾವರಣವಿತ್ತು. ಇದೇ ಕಾರಣಕ್ಕೆ ಕಳೆದ ನಾಲ್ಕು ದಿನಗಳಿಂದ ಶಾಲಾ, ಕಾಲೇಜುಗಳು ತೆರೆದಿರಲಿಲ್ಲ.

ಇಂದು ಮೋಡ ಕವಿದ ವಾತಾವರಣವಿದ್ದು ತುಂತುರು ಮಳೆಯಾಗುತ್ತಿದೆ. ಹೀಗಾಗಿ ಶಾಲಾ ಕಾಲೇಜು ಪುನರಾರಂಭಗೊಂಡಿದೆ. ಆದರೆ ಪರಿಸ್ಥಿತಿ ನೋಡಿಕೊಂಡು ರಜೆ ನೀಡುವ ಅಧಿಕಾರವನ್ನು ಆಯಾ ಶಿಕ್ಷಣ ಸಂಸ್ಥೆಗಳಿಗೆ ನೀಡಲಾಗಿದೆ.

ಇನ್ನೂ ಎರಡು ಮೂರು ದಿನ ರಾಜ್ಯದಾದ್ಯಂತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ, ಜುಲೈ 14 ರವರೆಗೂ ಕೊಡಗು, ಕರಾವಳಿ ಭಾಗದಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಕ್ಕಳ ಭವಿಷ್ಯದಲ್ಲಿ ಜೂಜಾಟವಾಡುವುದನ್ನು ನಿಲ್ಲಿಸಿ: ರಾಹುಲ್ ಗಾಂಧಿ

ಅಂತರರಾಷ್ಟ್ರೀಯ ಯೋಗ ದಿನದ ಹಿನ್ನೆಲೆ ಜನತೆಗೆ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಸತ್ತ ಪೋಷಕರ ಮೃತದೇಹಗಳ ನಡುವೆ ಒಂದು ರಾತ್ರಿ ಅಳುತ್ತಾ ಮಲಗಿದ 2ವರ್ಷದ ಮಗು

ನಾಳೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಮೆಟ್ರೋ ಸೇವೆಯಲ್ಲಿ ಮಹತ್ವದ ಬದಲಾವಣೆ

ಬಿಡದಿ ಟೌನ್‌ಶಿಪ್ ವಿರೋಧಿಸಿ ಪಾದಯಾತ್ರೆ: ನಿಖಿಲ್ ಕುಮಾರಸ್ವಾಮಿಗೆ ನಾಳೆ ಕೈಜೋಡಿಸಲಿದ್ದಾರೆ ಸಾವಿರಾರು ರೈತರು

ಮುಂದಿನ ಸುದ್ದಿ
Show comments