ಕಳೆದ ಒಂದು ವಾರದಿಂದ ರಾಜ್ಯದ ಪ್ರತಿಯೊಂದು ಜಿಲ್ಲೆಯನ್ನು ವರುಣ ದೇವ ಪ್ರವೇಶಿಸುತ್ತಿದ್ದಾನೆ. ಕಳೆದ ವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿತ್ತು.ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತ ಮತ್ತು ಬಂಗಾಳ ಕೊಲ್ಲಿಯ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಇಂದು ಮತ್ತು ನಾಳೆ ಸಹ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಇತ್ತ ನಿರಂತರ ಮಳೆಯಿಂದಾಗಿ ರಾಜ್ಯದ ಜಲಾಶಯಗಳು ಭರ್ತಿಯಾಗುತ್ತಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕ ಸಂದೇಶ ನೀಡಲಾಗಿದೆ.