Publish Date: Sat, 19 Mar 2022 (07:02 IST)
Updated Date: Sat, 19 Mar 2022 (09:51 IST)
ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಕೆಲವು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಇದು ಚಂಡಮಾರುತವಾಗಿ ಬದಲಾವಣೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳನ್ನ ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ಮಾರ್ಚ್ 20 ರಂದು ದಾವಣಗೆರೆ, ಚಿತ್ರದುರ್ಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.
20, 21 ರಂದು ಕರಾವಳಿ ಭಾಗದಲ್ಲಿ, ಉತ್ತರ ಒಳನಾಡಿನ ಕೊಪ್ಪಳ,ರಾಯಚೂರು, ಕಲಬುರಗಿ, ಯಾದಗಿರಿಯಲ್ಲಿ 20, 21 ರಂದು ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.
Ramya kosira
Publish Date: Sat, 19 Mar 2022 (07:02 IST)
Updated Date: Sat, 19 Mar 2022 (09:51 IST)