Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಜೈಪುರ : 1,050 ರೂ.ಗಳ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಅನ್ನು 500 ರೂ.ಗಳಿಗೆ ನೀಡುವುದಾಗಿ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಘೋಷಣೆ ಮಾಡಿದ್ದಾರೆ.
ಅಲ್ವಾರ್ನಲ್ಲಿ ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 1,050 ರೂ.ಗಳಿಗೆ ದೊರೆಯುವ ಗ್ಯಾಸ್ ಸಿಲಿಂಡರ್ ಅನ್ನು ಕೇವಲ 500 ರೂ.ಗೆ ನೀಡಲಿದ್ದೇವೆ. ಮುಂದಿನ ಏಪ್ರಿಲ್ 1 ರಿಂದಲೇ ಈ ಯೋಜನೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ಮುಂದಿನ ತಿಂಗಳು ಮಂಡಿಸುವ ಬಜೆಟ್ನಲ್ಲಿ ರಾಜ್ಯದಲ್ಲಿ ಹಣದುಬ್ಬರ ತಗ್ಗಿಸಲು ಕ್ರಮಕೈಗೊಳ್ಳಲಾಗುವುದು. ಸಾಮಾನ್ಯ ಜನರಿಗೆ ಅನುಕೂಲವಾಗುವಂತೆ ಕಿಚನ್ ಕಿಟ್ ಸಹ ವಿತರಿಸುವ ಯೋಜನೆ ಜಾರಿಗೆ ತರಲಾಗುವುದು. ಇದರೊಂದಿಗೆ ವಿದ್ಯಾರ್ಥಿಗಳು, ಯುವಜನರು, ಮಹಿಳೆಯರು, ರೈತರಿಗೆ ಮುಂದಿನ ಬಜೆಟ್ನಲ್ಲಿ ಗುಡ್ನ್ಯೂಸ್ ನೀಡಲಾಗುವುದು ಎಂದು ಭರವಸೆ ನೀಡಿದರು.