ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸೋಮವಾರದಂದು ಆರಂಭವಾಗಿರುವ ದೇಶದ ವಿವಿಧ ರಾಜ್ಯಗಳ ರಾಜ್ಯಪಾಲರು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‍ಗಳ ಎರಡು ದಿನಗಳ ಸಮಾವೇಶದಲ್ಲಿ ಮಾತನಾಡಿದ ಅವರು,’ ಯಾವುದೇ ರಾಜ್ಯವಿರಲಿ ರಾಜ್ಯಪಾಲರು ಅತ್ಯಂತ ಪ್ರಮುಖ ಕಾರ್ಯ ನಿರ್ವಹಿಸುತ್ತಾರೆ. ರಾಜ್ಯ ಸರ್ಕಾರಕ್ಕೆ ಮಾರ್ಗದರ್ಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಅವರು ಮುಖ್ಯ ಸಂಪರ್ಕ ಕೊಂಡಿಯಾಗಿ ಕೆಲಸ ಮಾಡುತ್ತಾರೆ. ಹಾಗೇ ರಾಜ್ಯದ ಜನರು ಕೂಡ ರಾಜ್ಯಪಾಲರ ಕಾರ್ಯಾಲಯ ಅಥವಾ ರಾಜಭವನವನ್ನು ಆದರ್ಶ ಮತ್ತು ಮೌಲ್ಯಗಳ ಕೇಂದ್ರ ಎಂಬ ದೃಷ್ಟಿಯಿಂದ ನೋಡುತ್ತಾರೆ. ಈ ಹಿನ್ನೆಲೆಯಲ್ಲಿ ದುರ್ಬಲ ಜೀವನ ಸುಧಾರಿಸಲು ಹಾಗೂ ಆ ಜನಾಂಗದ ಉನ್ನತ ಶಿಕ್ಷಣ ಮಟ್ಟವನ್ನು ಹೆಚ್ಚಿಸಲು ಪರಿವರ್ತಕರಾಗಿ ಕಾರ್ಯ ನಿರ್ವಹಿಸಬೇಕೆಂದು ವಿವಿಧ ರಾಜ್ಯಗಳ ರಾಜ್ಯಪಾಲರಿಗೆ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ