Publish Date: Wed, 12 Sep 2018 (11:42 IST)
Updated Date: Wed, 12 Sep 2018 (11:45 IST)
ಬೆಳಗಾವಿ: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ತಮ್ಮಿಂದಾಗಿ ಕಂಟಕ ಎದುರಾಗಿದೆ ಎಂಬ ಸುದ್ದಿಗಳನ್ನು ರಮೇಶ್ ಜಾರಕಿಹೊಳಿ ತಳ‍್ಳಿ ಹಾಕಿದ್ದಾರೆ.
ಪಿಎಲ್ ಡಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ನಮಗೆ ಅಸಮಾಧಾನವಾಗಿದೆ ಎಂಬುದು ಸುಳ್ಳು. ಹಾಗೊಂದು ವೇಳೆ ಆಗಿದ್ದರೆ ಆಗಲೇ ರಾಜೀನಾಮೆ ಕೊಡುತ್ತಿದ್ದೆವು. ನಮ್ಮಲ್ಲಿ ಏನೇ ಸಮಸ್ಯೆಗಳಿದ್ದರೂ ನಾವೇ ಬಗೆ ಹರಿಸಿಕೊಳ್ಳುತ್ತೇವೆ ಎಂದು ರಮೇಶ್ ಜಾರಕಿಹೊಳಿ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ.
ತಾವು ಮತ್ತು ಸಹೋದರ ಸತೀಶ್ ಜಾರಕಿಹೊಳಿ ಬಿಜೆಪಿ ಸೇರ್ಪಡೆ ವದಂತಿಗಳೆಲ್ಲಾ ಸುಳ್ಳು. ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ. ನಮಗೆ ಮಲ್ಲಿಕಾರ್ಜುನ ಖರ್ಗೆಯವರು ತಂದೆ ಸಮಾನರು. ಅವರು ಹೇಳಿದಂತೆ ಕೇಳುತ್ತೇವೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.