ನವದೆಹಲಿ : ವಿದೇಶದಿಂದ ಭಾರತಕ್ಕೆ ಬರುವ ವಿಮಾನ ಪ್ರಯಾಣಿಕರು ಈ ಹಿಂದೆ ಕಡ್ಡಾಯವಾಗಿ ಭರ್ತಿ ಮಾಡಬೇಕಿದ್ದ ಏರ್ ಸುವಿಧಾ ಪೋರ್ಟಲ್ ಇನ್ನು ಮುಂದೆ ಅಗತ್ಯವಿರುವುದಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.
ಈ ನಿಯಮ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಈ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯ ಪ್ರಕಟನೆ ನೀಡಿದ್ದು, ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ವ್ಯಾಕ್ಸಿನೇಷನ್ ಅನ್ನು ಹೆಚ್ಚಿಸಿದ್ದು, ವ್ಯಾಪಕ ಸುಧಾರಣೆಯಾಗಿದೆ.
ಇನ್ನು ಮುಂದೆ ವಿದೇಶಗಳಿಂದ ಭಾರತಕ್ಕೆ ಬರುವ ವಿಮಾನ ಪ್ರಯಾಣಿಕರು ಕೋವಿಡ್-19 ಲಸಿಕೆಗಳನ್ನು ಪಡೆದಿರುವ ಬಗ್ಗೆ ದೃಢೀಕರಣವನ್ನು ನೀಡಲಾಗುವ ಏರ್ ಸುವಿಧಾ ಫಾರ್ಮ್ ಅನ್ನು ಭರಿಸುವ ಅಗತ್ಯವಿರುವುದಿಲ್ಲ ಎಂದು ತಿಳಿಸಿದೆ.