ನವದೆಹಲಿ : ರೈತರಿಗೆ ಗುಡ್ ನ್ಯೂಸ್. ಅ.17 ಸೋಮವಾರ ಕಿಸಾನ್ ಸಮ್ಮಾನ್ ಯೋಜನೆಯಡಿ 12ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಲಾಗುತ್ತಿದೆ.
16 ಸಾವಿರ ಕೋಟಿ ಹಣ 8 ಲಕ್ಷ ರೈತರ ಖಾತೆಗಳನ್ನು ಸೇರಲಿದೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ, ಒಂದು ದೇಶ ಒಂದು ಗೊಬ್ಬರ ಹೆಸರಿನಲ್ಲಿ ಭಾರತ್ ಯೂರಿಯಾ, ಭಾರತ್ ಡಿಎಪಿ, ಭಾರತ್ ಎಂಓಪಿ, ಭಾರತ್ ಎನ್ಪಿಕೆ ರಸಗೊಬ್ಬರವನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಅಲ್ಲದೇ, 600 ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಮೋದಿ ಆರಂಭಿಸಲಿದ್ದಾರೆ. ದೇಶದಲ್ಲಿರುವ 2.7 ಲಕ್ಷ ಗೊಬ್ಬರದ ಅಂಗಡಿಗಳನ್ನು ಹಂತ ಹಂತವಾಗಿ ವನ್ ಸ್ಟಾಪ್ ಸೆಂಟರ್ಗಳಾಗಿ ಬದಲಿಸಿ ಪಿಎಂ ಸಮೃದ್ಧಿ ಕೇಂದ್ರಗಳೆಂದು ಮರುನಾಮಕರಣ ಮಾಡಲಾಗುತ್ತದೆ.