Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ತೊಗರಿ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿ ಪರಿಹಾರ ನೀಡಲು ತೀರ್ಮಾನಿಸಿದ್ದು ಈ ಹಿನ್ನೆಲೆಯಲ್ಲಿ ಇಂದು (ಮಂಗಳವಾರ) ಸಂಜೆ 4 ಗಂಟೆಗೆ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೃಷಿ ಇಲಾಖೆ, ಆರ್ಥಿಕ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಗಳ ಸಭೆಯಲ್ಲಿ ಪರಿಹಾರ ಎಷ್ಟು ಕೊಡಬೇಕೆಂದು ತೀರ್ಮಾನಿಸಿ, ಇಂದು (ಮಂಗಳವಾರ) ಸಂಜೆ ಘೋಷಣೆ ಮಾಡಲಾಗುವುದು ಎಂದರು.
ಈ ಭಾಗದಲ್ಲಿ ತೊಗರಿ ಬೆಳೆಗಾರರು ಸಂಕಷ್ಟಕ್ಕೆ ಈಡಾಗಿದ್ದಾರೆ. ಸುಮಾರು 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನಷ್ಟ ಉಂಟಾಗಿದೆ.