Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮತದಾರರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

ಮತದಾರರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ
ಬೆಂಗಳೂರು , ಶನಿವಾರ, 19 ಮೇ 2018 (06:14 IST)
ಬೆಂಗಳೂರು : ಬಹುಮತ ಸಾಬೀತಿಗೆ 15 ದಿನ ಅವಕಾಶ ನೀಡಿದ್ದು ಸರಿಯಿಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗಡೆ ಅವರು ಹೇಳಿದ್ದಾರೆ.


ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ ನಾಳೆಯೇ ಬಿಜೆಪಿಯವರು ಬಹುಮತ ಸಾಬೀತು ಮಾಡಬೇಕು ಎಂಬ ಸುಪ್ರಿಂ ಆದೇಶ ಸ್ವಾಗಾತಾರ್ಹವಾಗಿದೆ. ಕುದುರೆ ವ್ಯಾಪಾರವನ್ನು ತಪ್ಪಿಸಲು ಸಹಕಾರಿಯಾಗುತ್ತದೆ. ರಾಜ್ಯಪಾಲರು ಬಿಜೆಪಿಯನ್ನು ಮೊದಲು ಸರ್ಕಾರ ರಚನೆಗೆ ಆಹ್ವಾನ ಮಾಡಿದ್ದು ಸರಿ. ಇದರಲ್ಲಿ ಯಾವ ತಪ್ಪಿಲ್ಲ. ಆದರೆ ಬಹುಮತ ಸಾಬೀತಿಗೆ 15 ದಿನ ಕಾಲಾವಕಾಶ ನೀಡಿದ್ದು ತಪ್ಪು. ಇದನ್ನು ಸುಪ್ರಿಂ ಕೋರ್ಟ್ ಸರಿಪಡಿಸಿದೆ. ರಾಜ್ಯಪಾಲರ ನಡೆಯನ್ನು ರಾಜಕೀಯವಾಗಿ ಟೀಕೆ ಮಾಡುವುದು ಸುಲಭ. ರಾಜ್ಯಪಾಲರು ಕಾನೂನಾತ್ಮಕವಾಗಿ ನಡೆದುಕೊಂಡಿದ್ದಾರೆ’ ಎಂದು ತಿಳಿಸಿದ್ದಾರೆ.


‘ಇವತ್ತಿನ ರಾಜ್ಯದ ರಾಜಕೀಯ ಪರಿಸ್ಥಿತಿಗೆ ಮತದಾರರೆ ಮೂಲ ಕಾರಣ. ಜಾತಿಗಾಗಿ, ಹಣಕ್ಕಾಗಿ ಮತಹಾಕಿರುವ ಪರಿಣಾಮ ಈ ರೀತಿ ಅಂತ್ರತರ ಸೃಷ್ಟಿಯಾಗಿದೆ ಇದು ಬೇಸರದ ಸಂಗತಿಯಾಗಿದೆ’ ಎಂದು ಸಂತೋಷ್‌ ಹೆಗ್ಡೆ ಅವರು ಮತದಾರರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಮಾಡಿದ ಆರೋಪವೇನು ಗೊತ್ತಾ?