ಲಂಡನ್ : ಬ್ರಿಟನ್ ಪ್ರಧಾನಿ ಹುದ್ದೆ ರೇಸ್ನಿಂದ ಪೆನ್ನಿ ಮೊರ್ಡಂಟ್ ಹಿಂದೆ ಸರಿದ ಹಿನ್ನೆಲೆಯಲ್ಲಿ ಭಾರತ ಮೂಲದ ರಿಷಿ ಸುನಾಕ್ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಕನ್ಸರ್ವೇಟಿವ್ ಪಕ್ಷದ ಅಧ್ಯಕ್ಷ ಸ್ಥಾನ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಬೋರಿಸ್ ಜಾನ್ಸನ್ ಭಾನುವಾರ ಘೋಷಿಸಿದ್ದರಿಂದ ರಿಷಿ ಸುನಾಕ್ ಬ್ರಿಟನ್ನ ಮುಂದಿನ ಪ್ರಧಾನಿಯಾಗುವುದು ಬಹುತೇಕ ಖಚಿತವಾಗಿತ್ತು. ಈಗ ಸುನಾಕ್ಗೆ ಹೆಚ್ಚಿನ ಬೆಂಬಲ ವ್ಯಕ್ತವಾಗಿದೆ.
ಹೀಗಾಗಿ ಪ್ರತಿಸ್ಪರ್ಧಿ ಮೊರ್ಡಂಟ್ ಸ್ಪರ್ಧೆಯಿಂದ ಹಿಂದೆ ಸರಿಯಬೇಕು ಎಂದು ಪಕ್ಷದ ಸದಸ್ಯರಿಂದ ಒತ್ತಡ ಕೇಳಿಬಂದಿತ್ತು. ಯುಕೆಯ ಮೊದಲ ಬಿಳಿಯರಲ್ಲದ, ಭಾರತೀಯ ಮೂಲದವರೊಬ್ಬರು ಪ್ರಧಾನಿಯಾದರೆಂಬ ಇತಿಹಾಸ ಕೂಡ ಸೃಷ್ಟಿಯಾಗಿದೆ.