ಮಾಸ್ಕೋ : ರಷ್ಯಾದಾಳಿಯ ಬೆನ್ನಲ್ಲೆ ಇಡೀ ಉಕ್ರೇನ್ ದೇಶ ಸ್ಮಶಾನ ದಂತೆ ಆವರಿಸಿದೆ.
ರಷ್ಯಾದ ಪಡೆಗಳು ಉಕ್ರೇನ್ ಮೇಲಿನ ದಾಳಿಯನ್ನು ಮುಂದುವರಿಸಿದೆ. ಉಕ್ರೇನ್ ಹಾಗೂ ರಷ್ಯಾ ಯುದ್ಧ ಸಂಘರ್ಷ ವಿಶ್ವದಲ್ಲೇ ಭಾರಿ ಆತಂಕವನ್ನುಂಟು ಮಾಡಿದೆ.
ಇದೀಗ ಪೋಲೆಂಡ್, ಬಲ್ಗೇರಿಯಾ, ಜೆಕ್ ಗಣರಾಜ್ಯಗಳ ವಿಮಾನಯಾನ ಸಂಸ್ಥೆಗಳನ್ನು ರಷ್ಯಾ ನಿಷೇಧಿಸಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಉಕ್ರೇನ್ ಮೇಲಿನ ದಾಳಿಯ ಹಿನ್ನೆಲೆಯಲ್ಲಿ ಜೆಕ್ ಗಣರಾಜ್ಯ, ಪೋಲೆಂಡ್ ಮತ್ತು ಬಲ್ಗೇರಿಯಾ ರಾಷ್ಟ್ರಗಳು ರಷ್ಯಾದ ವಿಮಾನಗಳಿಗೆ ತಮ್ಮ ವಾಯುಪ್ರದೇಶವನ್ನು ಮುಚ್ಚುವುದಾಗಿ ಹೇಳಿದ್ದವು. ಇದಕ್ಕೆ ಪ್ರತಿಕಾರವಾಗಿ ಈ ಮೂರು ರಾಷ್ಟ್ರಗಳ ವಿಮಾನಯಾನ ಸಂಸ್ಥೆಗಳನ್ನು ನಿಷೇಧಿಸಲಾಗಿದೆ ಎಂದು ರಷ್ಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ ತಿಳಿಸಿದೆ.
ಬಾಂಬ್ ಸ್ಫೋಟಕ್ಕೆ ಜನರು ದಿಕ್ಕಾಪಾಲಾಗಿ ಓಡುತ್ತಿದ್ದಾರೆ. ಈಗಾಗಲೇ ಕೀವ್ ನಗರವನ್ನು ರಷ್ಯಾ ಸೇನೆ ಸಂಪೂರ್ಣವಾಗಿ ಸುತ್ತವರಿದಿದ್ದು, ಕ್ಷಣಕ್ಷಣಕ್ಕೂ ಆತಂಕ ಸೃಷ್ಟಿಯಾಗುತ್ತಿದೆ. ಕೀವ್ನಲ್ಲಿ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಇಂಟರ್ನೆಟ್ ಸೇವೆ ಕೂಡ ಸ್ಥಗಿತಗೊಂಡಿದೆ.