ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಸರ್ಕಾರ ಮಹತ್ವಾಕಾಂಕ್ಷೆಯ ವಿದೇಶದಲ್ಲಿ ಉನ್ನತ ವ್ಯಾಸಾಂಗ ಯೋಜನೆ ಜಾರಿಗೆ ತಂದಿದ್ದು, ವಿದೇಶದಲ್ಲಿ ಉನ್ನತ ವ್ಯಾಸಾಂಗಕ್ಕಾಗಿ ಅರ್ಜಿ ಆಹ್ವಾನಿಸಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ವಿದೇಶಿ ಉನ್ನತ ವ್ಯಾಸಂಗ ಯೋಜನೆ ಜಾರಿಗೆ ತಂದಿದ್ದು, ಈ ಯೊಜನೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ವಿದೇಶದಲ್ಲಿ ಸ್ನಾತಕೋತ್ತರ ಪದವಿ ಹಾಗೂಉ ಪಿಹೆಚ್ ಡಿ ಪದವಿ ಅಧ್ಯಯನ ಮಾಡಲು ಧನಸಹಾಯ ನೀಡಲಿದೆ.
ಇಲಾಖೆ ಪ್ರಕಟಿಸಿರುಉವ ವಿದೇಶ/ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪತ್ರ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಇಲಾಖೆಯ ವೆಬ್ ಸೈಟ್ www.sw.kar.nic.in ನಲ್ಲಿ ದಿನಾಂಕ 24-08-2021 ರಿಂದ 07-09-2021 ರ ಸಂಜೆ 5.30 ಗಂಟೆಯವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.