Publish Date: Fri, 19 Nov 2021 (19:39 IST)
Updated Date: Fri, 19 Nov 2021 (20:23 IST)
ಬೆಂಗಳೂರು : ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆ ಹಿನ್ನೆಲೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ, ಕೋಲಾರ ಜಿಲ್ಲೆಯಲ್ಲಿ, ತುಮಕೂರು, ರಾಮನಗರ, ಮೈಸೂರು, ಧಾರವಾಡ ಹಾಗೂ ಹಾವೇರಿ ಜಿಲ್ಲೆಯಲ್ಲಿ ಮಳೆ ಹಿನ್ನೆಲೆ ನಾಳೆ ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗಿದೆ.