ಮಡಿಕೇರಿ : ಸಿಲಿಕಾನ್ ಸಿಟಿಯಲ್ಲಿ ಕೋವಿಡ್ ಕಡಿಮೆ ಆಗಲಿ ಅಥವಾ ಜಾಸ್ತಿ ಆಗಲಿ ಫೆಬ್ರವರಿ ಆರಂಭದಿಂದಲೇ ಬೆಂಗಳೂರಿನಲ್ಲಿ ಶಾಲೆ ಆರಂಭವಾಗುತ್ತವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸುಳಿವು ನೀಡಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮೂರ್ನಾಡಿನಲ್ಲಿ ಮಾತಾನಾಡಿದ ಅವರು, ಕಳೆದ ವಾರದ ಕೋವಿಡ್ ಸಂಬಂಧ ಸಭೆ ನಡೆಸುವ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಶಾಲೆ ಆರಂಭಿಸುವ ಬಗ್ಗೆ ಚರ್ಚಿಸಲಾಗಿತ್ತು.
ಇದೇ 29 ರಂದು ನಡೆಯುವ ಸಭೆಯಲ್ಲಿ ಶಾಲೆಗಳ ಅರಂಭ ಮಾಡುವ ಬಗ್ಗೆ ನಿರ್ಧಾರ ಮಾಡುವುದಾಗಿ ತಿಳಿಸಿದರು.
ಈಗಾಗಲೇ ಬೆಂಗಳೂರಿನಲ್ಲಿ ಪ್ರತಿದಿನ ಕೋವಿಡ್ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಹೀಗಾಗಿ ಶಾಲೆಗಳನ್ನು ಓಪನ್ ಮಾಡುವ ಸಾಧ್ಯತೆಗಳು ಜಾಸ್ತಿ ಇದೆ. ಈಗಾಗಲೇ ತಜ್ಞರು ಮೂರನೇ ಅಲೆಯಲ್ಲಿ ಹೇಳಿದಂತೆ ರಾಜ್ಯದಲ್ಲಿ ಒಟ್ಟು 77ಸಾವಿರ ಶಾಲೆಯನ್ನು ಪ್ರಾರಂಭಿಸಿದ್ದೇವೆ.