ಬೆಂಗಳೂರು : ಪಂಚ ಗ್ಯಾರಂಟಿ ಜಾರಿಗಾಗಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಕತ್ತರಿ ಹಾಕುತ್ತಾ ಎಂಬ ಪ್ರಶ್ನೆ ಎದ್ದಿದೆ.
ಕಲಬುರಗಿಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ನಮ್ಮ ಸರ್ಕಾರ ನೀಡಿದ 5 ಗ್ಯಾರಂಟಿ ಬಗ್ಗೆ ಮಾತ್ರ ನಾವು ಯೋಚನೆ ಮಾಡುತ್ತಿದ್ದೇವೆ. ಪಿಎಂ ಕಿಸಾನ್ ಯೋಜನೆ ಅದು ನಮ್ಮ ಸರ್ಕಾರದ ಗ್ಯಾರಂಟಿಯಲ್ಲಿ ಇಲ್ಲ ಅಂದಿದ್ದಾರೆ.
ಚುನಾವಣಾ ಪ್ರಚಾರದಲ್ಲಿ ಈ ಯೋಜನೆಗಳಿಗೆ ಹಣವನ್ನು ಹೇಗೆ ಹೊಂದಿಸಲಾಗುತ್ತದೆ ಎಂದು ಕೇಳಿದ್ದಕ್ಕೆ ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ 40% ಕಮಿಷನ್ ಹಣವನ್ನು ಇದಕ್ಕೆ ವಿನಿಯೋಗಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ಆದರೆ ಈಗ ಹಣ ಹೊಂದಿಸಲು ಸರ್ಕಾರ ನಾನಾ ಕಸರತ್ತು ಮಾಡುತ್ತಿದೆ.
ಆಸ್ತಿ ತೆರಿಗೆ ಹೆಚ್ಚಳ, ಪಿಎಂ ಕಿಸಾನ್ ಸಮ್ಮನ್ ಯೋಜನೆಗೆ ಕತ್ತರಿ, ಪೆಟ್ರೋಲ್ ಮತ್ತು ಡಿಸೇಲ್ ಮೇಲೆ ಸೆಸ್, ಮದ್ಯದ ಮೆಲೆ ತೆರಿಗೆ ಹಾಕುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಲ್ಲಿಯವರೆಗೆ ಸರ್ಕಾರದ ಕಡೆಯಿಂದ ಅಧಿಕೃತವಾಗಿ ಯಾವುದೇ ನಿರ್ಧಾರ ಪ್ರಕಟವಾಗಿಲ್ಲ.