Publish Date: Sat, 29 Jan 2022 (05:46 IST)
Updated Date: Sat, 29 Jan 2022 (00:48 IST)
ಕೆಲವು ದಿನಗಳಿಂದ ರವಿ ಡಿ ಚೆನ್ನಣ್ಣವರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬರುತ್ತಿವೆ.
ಸಾಮಾಜಿಕ ಜಾಲತಾಣಗಳಲ್ಲಿ ಇವರ ವಿರುದ್ಧ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ರವಿ ಡಿ. ಚನ್ನಣ್ಣನವರ್ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳ ವಿರುದ್ಧ ಗ್ರಾನೈಟ್ ಉದ್ಯಮಿಯೊಬ್ಬರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರು.
ಈ ದೂರಿನ ಪ್ರತಿ ಹೊರ ಬಿದ್ದಿದ್ದೇ ದೊಡ್ಡ ವಿವಾದ ಸೃಷ್ಟಿಸಿತ್ತು. ಈ ಪ್ರಕರಣದಲ್ಲಿ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ರವಿ ಡಿ. ಚನ್ನಣ್ಣನವರ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.
ಪ್ರಕರಣ ಸಂಬಂಧ ಮಂಜುನಾಥ್ ಎಂಬುವವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ರವಿ ಚನ್ನಣ್ಣನವರ್ 25 ಲಕ್ಷ, ಡಿವೈಎಸ್ಪಿ 15 ಲಕ್ಷ ಹಾಗೂ ಮತ್ತೊಬ್ಬ ಅಧಿಕಾರಿ 10 ಲಕ್ಷ ರೂಪಾಯಿ ಸ್ವೀಕರಿಸಿರುವ ಕುರಿತು ದೂರಿನಲ್ಲಿ ಸ್ಪಷ್ವವಾಗಿ ಉಲ್ಲೇಖಿಸಿದ್ದಾರೆ.