Publish Date: Sat, 15 Sep 2018 (06:58 IST)
Updated Date: Sat, 15 Sep 2018 (07:00 IST)
ಪಣಜಿ : ತೀವ್ರ ಅನಾರೋಗ್ಯದ ಹಿನ್ನಲೆಯಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಅಧಿಕಾರದಿಂದ ಕೆಳಗಿಳಿಯುವ ನಿರ್ಧಾರ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಶುಕ್ರವಾರ ಸಂಜೆ ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ನಿಂದ ಬಳಲುತ್ತಿರುವ ಅವರು ಈ ಹಿಂದೆ ವಿದೇಶದಲ್ಲಿ ಚಿಕಿತ್ಸೆ ಪಡೆದು ಮತ್ತೆ ಮುಖ್ಯಮಂತ್ರಿಯ ಕರ್ತವ್ಯ ನಿಭಾಯಿಸುತ್ತಿದ್ದರು. ಆದರೆ ಇದೀಗ ತೀವ್ರ ಜ್ವರದಿಂದ ಬಳುತ್ತಿರುವ ಪರಿಕ್ಕರ್ ಅವರನ್ನು ಕಾಂಡೋಲಿಮ್ ನಲ್ಲಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.
ಇದೀಗ ಅವರು ಅಧಿಕಾರದಲ್ಲಿ ಮುಂದುವರಿಯುವುದು ಸಾಧ್ಯವಿಲ್ಲ ಎಂದು ನಿರ್ಧರಿಸಿ ಅಲ್ಲಿಂದಲೇ ಬಿಜೆಪಿ ರಾಷ್ಟ್ರೀಯ ಮುಖಂಡರಿಗೆ ಮಾಹಿತಿ ನೀಡಿ ಮುಖ್ಯಮಂತ್ರಿ ಹುದ್ದೆಗೆ ಪಕ್ಷ ಬೇರೆ ಅಭ್ಯರ್ಥಿ ಹುಡುಕುವಂತೆ ಹೇಳಿದ್ದಾರೆ ಎಂದು ತಿಳಿದುಬಂದಿದೆ. ಈಗ ಗೋವಾಗೆ ಹೊಸ ಮುಖ್ಯಮಂತ್ರಿ ನೇಮಕ ಮಾಡಲು ಬಿಜೆಪಿ ದೆಹಲಿಯಿಂದ ಸಮಿತಿಯೊಂದನ್ನು ರಾಜ್ಯಕ್ಕೆ ಕಳಿಸಲಿದೆ ಎಂಬುದಾಗಿ ಕೂಡ ತಿಳಿದು ಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.