ಬೆಂಗಳೂರು :ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬಿಜೆಪಿ ಪಕ್ಷದವರ ಮೇಲೆ ವೈಯಕ್ತಿಕ ಆಪಾದನೆ ಮಾಡೋ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಶೋಭಾ ಕರಂದ್ಲಾಜೆ ಅವರು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ರಾಹುಲ್ ಗಾಂಧಿ ಅವರು ಕಲಬುರಗಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಆರ್ಎಸ್ಎಸ್ ಮತ್ತು ಬಿಜೆಪಿ ಶಾಸಕರನ್ನು ಕಳ್ಳರೆಂದು ಕರೆದು, ಪ್ರಧಾನಿ ಮೋದಿ, ಸಚಿವ ಪಿಯೂಷ್ ಗೋಯಲ್, ಮತ್ತು ಅಮಿತ್ ಷಾ ಪುತ್ರ ಜೈಶಾ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು.
ಈ ಹೇಳಿಕೆ ವಿರುದ್ಧ ಕಿಡಿಕಾರಿದ ಶೋಭಾ ಕರಂದ್ಲಾಜೆ ಅವರು,’ ರಾಹುಲ್ ಗಾಂಧಿ ದ್ವೇಷ ಭಾವನೆ ಹರಡುತ್ತಿದ್ದಾರೆ. ಅಲ್ಪಸಂಖ್ಯಾತರು ಮತ್ತು ದಲಿತರ ಮೇಲೆ ಬಿಜೆಪಿ ದೌರ್ಜನ್ಯ ನಡೆಸುತ್ತಿದ್ದಾರೆ ಎಂದಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಆರ್ಎಸ್ಎಸ್ ಸರ್ಕಾರ ನಡೆಸಲಿದೆ ಎಂದು ಆರೋಪ ಮಾಡಿದ್ದಾರೆ. ಹೀಗಾಗಿ ರಾಹುಲ್ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಚುನಾವಣಾ ಪ್ರಚಾರಕ್ಕೆ ಅನುಮತಿ ನೀಡಬಾರದು’ ಎಂದು ಚುನಾವಣಾಧಿಕಾರಿಗಳಿಗೆ ದೂರು ನೀಡುವುದರ ಮೂಲಕ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ