Publish Date: Fri, 09 Jun 2023 (06:50 IST)
Updated Date: Fri, 09 Jun 2023 (09:52 IST)
ಕೋಲಾರ : ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೋಡಿಮಠದ ಸ್ವಾಮೀಜಿ ನುಡಿದಿದ್ದ ಭವಿಷ್ಯ ನಿಜವಾಗಿದೆ. ಯಾವುದೇ ಪಕ್ಷಗಳು ಒಟ್ಟಾಗಿ ಹೋಗುವುದಿಲ್ಲ. ಪಕ್ಷಾಂತರಗಳು ಹೆಚ್ಚಲಿವೆ.
ಒಂದೇ ಪಕ್ಷ ಅಧಿಕಾರವನ್ನು ಹಿಡಿಯಲಿದೆ ಎಂದು ಹೇಳಿದ್ದರು. ಅದರಂತೆ ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಏಕಾಂಗಿಯಾಗಿ ಅಧಿಕಾರಕ್ಕೆ ಬಂದಿದೆ. ಇದರ ಮಧ್ಯೆ ಇದೀಗ ಕೋಡಿಮಠದ ಡಾ. ಶಿವಾನಂದ ಮಹಾ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಇಂದು (ಜೂನ್ 08) ಕೋಲಾರ ತಾಲ್ಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ ಮಠಕ್ಕೆ ಕೋಡಿಮಠ ಶ್ರೀ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ಈ ಹಿಂದೆ ಹೇಳಿದಂತೆ ರಾಜ್ಯದಲ್ಲಿ ಬಹುಮತದ ಸರ್ಕಾರ ಬಂದಿದೆ.
ಈ ವರ್ಷದಲ್ಲಿ ದೊಡ್ಡ ಅವಘಡ ನಡೆಯುತ್ತೆ ಎಂದು ಹೇಳಿದ್ದೆ ಅದರಂತೆ ರೈಲು ದುರಂತ ನಡೆದಿದೆ. ಇನ್ನೂ ಒಂದು ಗಂಡಾಂತರ ದೇಶಕ್ಕೆ ಕಾದಿದೆ. ಈ ವರ್ಷ ಅಚನಕ್ಕಾಗಿ ಗುಡುಗು ಮಿಂಚು, ಬರಲಿದೆ. ಎರಡು ಮೂರು ರಾಷ್ಟ್ರಗಳು ನೀರಿನಲ್ಲಿ ಮುಳುಗಡೆಯಾಗಲಿವೆ. ಎಲ್ಲೋ ನಡೆದ ಬಾಂಬ್ ದಾಳಿಯಿಂದ ಸಾಕಷ್ಟು ನಮಗೆ ಅನಾಹುತ ಸಂಭವಿಸಲಿದೆ ಎಂದು ಆಘಾತಕಾರಿ ಭವಿಷ್ಯ ನುಡಿದರು.