Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮತ್ತೆ ಟ್ವಿಟರ್ ನಲ್ಲಿ ಆಕ್ಟಿವ್ ಆದರು ಸಿದ್ದರಾಮಯ್ಯ!

ಮತ್ತೆ ಟ್ವಿಟರ್ ನಲ್ಲಿ ಆಕ್ಟಿವ್ ಆದರು ಸಿದ್ದರಾಮಯ್ಯ!
ಬೆಂಗಳೂರು , ಭಾನುವಾರ, 1 ಜುಲೈ 2018 (09:13 IST)
ಬೆಂಗಳೂರು: ಉಜಿರೆಯ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ 12 ದಿನಗಳ ವಿಶ್ರಾಂತಿ ಪಡೆದು ಹೊಸ ಉತ್ಸಾಹದೊಂದಿಗೆ ಆಗಮಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಟ್ವಿಟರ್ ನಲ್ಲಿ ಸಕ್ರಿಯರಾಗಿದ್ದು, ಎದುರಾಳಿಗಳಿಗೆ ತಿರುಗೇಟು ಕೊಟ್ಟಿದ್ದಾರೆ.

ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿದ್ದಾಗ ಬಜೆಟ್ ಬಗ್ಗೆ ತಮ್ಮ ಆಪ್ತರೊಂದಿಗೆ ಅಸಮಾಧಾನ ವ್ಯಕ್ತಪಡಿಸಿದ್ದ ಸಂಭಾಷಣೆಯ ವಿಡಿಯೋ ವೈರಲ್ ಆಗಿದ್ದರ ಬಗ್ಗೆ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಕಿಡಿ ಕಾರಿದ್ದಾರೆ.

ಬೆಂಗಳೂರಿಗೆ ಬಂದ ಮೇಲೆ ಪತ್ರಕರ್ತರು ಈ ವಿವಾದದ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಿದ್ದರಾಮಯ್ಯ ನಾನು ಅಸಮಾಧಾನಗೊಂಡಿದ್ದೇನೆಂದು ನಿಮಗೆ ಯಾರು ಹೇಳಿದ್ದು? ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ ಎಂದಿದ್ದರು. ಇದೇ ಕಾರಣಕ್ಕೆ ಕೆಲವರು ಸಿದ್ದರಾಮಯ್ಯ ಯು ಟರ್ನ್ ತೆಗೆದುಕೊಂಡಿದ್ದಾರೆ ಎಂದಿದ್ದಕ್ಕೆ ತಿರುಗೇಟು ನೀಡಿದ್ದಾರೆ.

‘ನನ್ನ ಖಾಸಗಿ ಸಂಭಾಷಣೆಯ ಎಡಿಟೆಡ್ ವಿಡಿಯೋ ಬಗ್ಗೆ ಶುಕ್ರವಾರದವರೆಗೂ ನಾನು ಪ್ರತಿಕ್ರಿಯಿಸಿರಲೇ ಇಲ್ಲ. ಹೀಗಿರುವಾಗ ಯು ಟರ್ನ್-ಹಿ ಟರ್ನ್ ಪ್ರಶ್ನೆ ಎಲ್ಲಿದೆ? ಅದು ದುರುದ್ದೇಶದಿಂದ ಕೂಡಿದ ಎಡಿಟೆಡ್ ವಿಡಿಯೋ.  ಅದರ ಹಿಂದೆ ಯಾರಿದ್ದಾರೆ ಎನ್ನುವುದನ್ನು ಶೀಘ್ರ ಪತ್ತೆ ಹಚ್ಚಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ಅಷ್ಟೇ ಅಲ್ಲ ‘ರಾಜ್ಯದ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಇದನ್ನು ಅಸ್ಥಿರಗೊಳಿಸಲು ಕೆಲವು ಶಕ್ತಿಗಳು ಹಗಲು-ಇರುಳು ಶ್ರಮಿಸುತ್ತಿವೆ. ನನ್ನ ಖಾಸಗಿ ಸಂಭಾಷಣೆಯ ವಿಡಿಯೋದ ಹಿಂದಿನ-ಮುಂದಿನ ಭಾಗಗಳನ್ನು ಕತ್ತರಿಸಿ ಪ್ರಸಾರ ಮಾಡುವುದು ಪತ್ರಿಕಾ ಧರ್ಮವಲ್ಲ. ಇದನ್ನು ನಂಬಿ ಮೈತ್ರಿ ಪಕ್ಷಗಳ ನಾಯಕರು ಪ್ರತಿಕ್ರಿಯಿಸಬಾರದು, ನಿರ್ಲಕ್ಷಿಸಬೇಕು’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ನಿರ್ವಹಣಾ ಮಂಡಳಿ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದ ಸಿಎಂ ಎಚ್ ಡಿಕೆ