ಬೆಂಗಳೂರು: ಇಂದಿನಿಂದ ಮಾಜಿ ಸಿಎಂ ಸಿದ್ದರಾಮಯ್ಯ ಯುರೋಪ್ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿಂದ ಮರಳಿದ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಸದ್ಯಕ್ಕೆ ಬೆಳಗಾವಿ ನಾಯಕ, ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಇಲ್ಲಿನ ಕಾಂಗ್ರೆಸ್ ನಾಯಕರು ಸಚಿವ ಡಿಕೆ ಶಿವಕುಮಾರ್ ತಮ್ಮ ಜಿಲ್ಲೆಯ ನಿರ್ಧಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಾಯಕರ ಭಿನ್ನಮತ ಕಾಂಗ್ರೆಸ್ ಹೈಕಮಾಂಡ್ ಗೆ ಹೊಸ ತಲೆನೋವಾಗಿ ಪರಿಣಮಿಸಿದೆ.
ಹೀಗಾಗಿ ಈ ಭಿನ್ನಮತ ಶಮನ ಮಾಡುವ ಹೊಣೆಗಾರಿಕೆ ಸಿದ್ದರಾಮಯ್ಯ ಹೆಗಲಿಗೇರಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಈ ಹೊಣೆಗಾರಿಕೆಯನ್ನು ಸಿದ್ದರಾಮಯ್ಯಗೆ ನೀಡಿದ್ದಾರೆ. ಆದರೆ ಯುರೋಪ್ ಪ್ರವಾಸದಿಂದ ಬಂದ ಮೇಲೆಯೇ ಈ ಭಿನ್ನಮತ ಶಮನ ಮಾಡಲು ಸಂಧಾನ ನಡೆಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮರಳಿದ ಬಳಿಕ ಕಾಂಗ್ರೆಸ್ ನಲ್ಲಿ ಏನೆಲ್ಲಾ ಬದಲಾವಣೆಯಾಗಲಿದೆ ಎಂದು ಕಾದು ನೋಡಬೇಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.