ಬೆಂಗಳೂರು: ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಮೊನ್ನೆ ಸುಪ್ರೀಂಕೋರ್ಟ್ ನೀಡಿದ ತೀರ್ಪು ಅಯೋಧ್ಯೆ ರಾಮಜನ್ಮಭೂಮಿ ವಿವಾದಕ್ಕೆ ಸಿಕ್ಕ ಜಯ ಎಂದಿರುವ ಬಿಜೆಪಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಯಾರೊಬ್ಬರ ಸೋಲು ಅಥವಾ ಯಾರೊಬ್ಬರ ಗೆಲುವು ಅಲ್ಲ. ಎರಡೂ ಸಮುದಾಯದವರು ತೀರ್ಪನ್ನು ಗೌರವಿಸಿದ್ದಾರೆ. ಆದರೆ ಬಿಜೆಪಿ ಮತ್ತು ಆರ್ ಎಸ್ಎಸ್ ನವರು ಇದು ತಮ್ಮ ಗೆಲುವು ಎಂದು ಬಿಂಬಿಸುವ ಮೂಲಕ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಅವರ ನಡೆ ಖಂಡನೀಯ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಮೊನ್ನೆಯಷ್ಟೇ ಸುಪ್ರೀಂಕೋರ್ಟ್ ಮುಸ್ಲಿಮರಿಗೆ ನಮಾಜ್ ಮಾಡಲು ಮಸೀದಿಯೇ ಬೇಕೆಂದಿಲ್ಲ ಎಂದು ತೀರ್ಪು ಕೊಟ್ಟಿತ್ತು. ಇದು ಪರೋಕ್ಷವಾಗಿ ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದ್ದಾಗಿತ್ತು. ಇದೇ ವಿಚಾರವಾಗಿ ಇದೀಗ ಸಿದ್ದರಾಮಯ್ಯ ತಡವಾಗಿ ಪ್ರತಿಕ್ರಿಯಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.