ಮೈಸೂರು: ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ನಾನೇ ಎಂದು ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.
ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ‘ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಸಮಸ್ಯೆ ಬರದಂತೆ ನನ್ನನ್ನು ಸಮನ್ವಯ ಸಮಿತಿ ಅಧ್ಯಕ್ಷನನ್ನಾಗಿ ನೇಮಿಸಲಾಗಿದೆ. ಸರ್ಕಾರಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ನನ್ನ ಕೆಲಸ. ಈ ಸರ್ಕಾರವನ್ನು ಅಸ್ಥಿರಗೊಳಿಸಲು ಯಾವೊಬ್ಬ ಶಾಸಕರೂ ಪ್ರಯತ್ನಿಸಲ್ಲ’ ಎಂದಿದ್ದಾರೆ.
ಅಷ್ಟೇ ಅಲ್ಲದೆ, ‘ಈ ಸಮ್ಮಿಶ್ರ ಸರ್ಕಾರದ ಬಗ್ಗೆ ಜನರಲ್ಲಿ ಒಳ್ಳೆ ಅಭಿಪ್ರಾಯವಿದೆ. ಈ ಸರ್ಕಾರ ಐದು ವರ್ಷ ಪೂರೈಸಿಯೇ ಪೂರೈಸುತ್ತದೆ. ಅದರಲ್ಲಿ ಯಾವುದೇ ಸಂಶಯವೂ ಇಲ್ಲ. ಏನೇ ಭಿನ್ನಾಭಿಪ್ರಾಯಗಳು ಬಂದರೂ ನನ್ನ ನೇತೃತ್ವದಲ್ಲೇ ಬಗೆಹರಿಯಲಿದೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.