ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿಣಿ ಸಭೆಗೆ ದೆಹಲಿಗೆ ಹೋಗಿರುವ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ರಾಜ್ಯದ ಕಾಂಗ್ರೆಸ್ ನಾಯಕರ ವಿರುದ್ಧ ಹೈಕಮಾಂಡ್ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಡಿಸಿಎಂ ಪರಮೇಶ್ವರ್ ಮತ್ತು ಸಚಿವ ಡಿಕೆ ಶಿವಕುಮಾರ್ ಎಲ್ಲಾ ವಿಚಾರದಲ್ಲೂ ಮೌನ ವಹಿಸುತ್ತಿದ್ದಾರೆ. ಹಿಂದಿನ ಸರ್ಕಾರಗಳ ಜನಪ್ರಿಯ ಯೋಜನೆಗಳನ್ನು ಸಿಎಂ ಕುಮಾರಸ್ವಾಮಿ ಕಡಿತಗೊಳಿಸುತ್ತಿದ್ದರೂ ಇವರಿಬ್ಬರೂ ಚಕಾರವೆತ್ತುತ್ತಿಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಅನ್ನಭಾಗ್ಯ ಯೋಜನೆ ಕಡಿತ, ಮಾತೃಪೂರ್ಣ ಯೋಜನೆಯನ್ನು ಮಾತೃಶ್ರೀ ಯೋಜನೆ ಜತೆ ವಿಲೀನಗೊಳಿಸುವ ಸಿಎಂ ಪ್ರಸ್ತಾಪಕ್ಕೆ ಈ ಇಬ್ಬರೂ ಮೌನ ವಹಿಸಿದ್ದಾರೆ. ಈ ರೀತಿ ಸಿಎಂ ಹೇಳಿದ್ದಕ್ಕೆಲ್ಲಾ ತಲೆಯಾಡಿಸುತ್ತಾ ಹೋದರೆ ಕಾಂಗ್ರೆಸ್ ಗೇ ನಷ್ಟ ಎಂದು ರಾಹುಲ್ ಗಾಂಧಿ ಬಳಿ ಸಿದ್ದರಾಮಯ್ಯ ದೂರಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.