ಈ ಸಿನಿಮಾ ಹಾಗೂ ರಿಯಾಲಿಟಿ ಶೋಗಳು ಮತದಾರರ ಮೇಲೆ ಪರಿಣಾಮ ಬೀರಲಿದೆ ಎಂಬ ಉದ್ದೇಶದಿಂದ ಎಸ್ ಟಿ ಸೋಮಶೇಖರ್ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಜಗ್ಗೇಶ್ ಅವರು ನಡೆಸಿಕೊಡುವ ರಿಯಾಲಿಟಿ ಶೋ ಗಳು ದೂರದರ್ಶನ, ಖಾಸಗಿ ವಾಹನಿ, ಸ್ಥಳೀಯ ಕೇಬಲ್ ನೆಟ್ವರ್ಕ್ ಮತ್ತು ಇತರೆ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಇದು ಚುನಾವಣೆ ನೀತಿ ಸಂಹಿತೆ ವಿರುದ್ಧವಾಗಿದೆ. ಇಂತಹ ಕಾರ್ಯಕ್ರಮಗಳು ಪ್ರಸಾರ ಆಗುವುದರಿಂದ ಮತದಾರರ ಮೇಲೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಪ್ರಭಾವ ಬೀರುವ ಸಾಧ್ಯತೆ ಇದ್ದು, ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವರೆಗೂ ಜಗ್ಗೇಶ್ ಅವರ ಕಾರ್ಯಕ್ರಮಗಳು ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಬೇಕು ಎಂದು ಎಸ್ ಟಿ ಸೋಮಶೇಖರ್ ಅವರು ಚುನಾವಣಾ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ