Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ರಾಜ್ಯದಲ್ಲಿ ನಾಳೆಯಿಂದ SSLC ಪರೀಕ್ಷೆ

ರಾಜ್ಯದಲ್ಲಿ ನಾಳೆಯಿಂದ SSLC ಪರೀಕ್ಷೆ
Bangalore , ಭಾನುವಾರ, 18 ಜುಲೈ 2021 (15:05 IST)
ಬೆಂಗಳೂರು (ಜು.18):  ನಾಳೆಯಿಂದ ರಾಜ್ಯದಲ್ಲಿ 2020-21 ನೇ ಸಾಲಿನ SSLC ಪರೀಕ್ಷೆ ಪ್ರಾರಂಭವಾಗಲಿದ್ದು, ಎರಡು ದಿನಗಳ ಕಾಲ ಪರೀಕ್ಷೆ ನಡೆಯಲಿದೆ. ಜುಲೈ 19 ಮತ್ತು 22 ರಂದು ಪರೀಕ್ಷೆ ನಡೆಯಲಿದೆ. 
ಪರೀಕ್ಷಾ ಸಿದ್ಧತೆ ಪೂರ್ಣಗೊಳಿಸಿರುವ ಶಿಕ್ಷಣ ಇಲಾಖೆ ಕೊರೋನಾ ಮಾರ್ಗಸೂಚಿಯೊಂದಿಗೆ ಪರೀಕ್ಷೆ ನಡೆಸುತ್ತಿದೆ.

ಪರೀಕ್ಷಾ ಕೇಂದ್ರಗಳಲ್ಲಿ ವಿಶೇಷ ಕೊಠಡಿ ತೆರೆಯಲಾಗಿದ್ದು,

•             ನಾಳೆಯಿಂದ ರಾಜ್ಯದಲ್ಲಿ 2020-21 ನೇ ಸಾಲಿನ SSLC  ಪರೀಕ್ಷೆ ಪ್ರಾರಂಭ
•             2 ದಿನಗಳ ಕಾಲ ಜುಲೈ 19 ಮತ್ತು 22 ರಂದು ಪರೀಕ್ಷೆ ನಡೆಯಲಿದೆ. 

 
ಪ್ರತಿ ತಾಲೂಕಿಗೊಂದು ತುರ್ತು ಚಿಕಿತ್ಸಾ ವಾಹನ ವ್ಯವಸ್ಥೆ ಮಾಡಲಾಗಿದೆ.
ಕೋವಿಡ್ ಕೇರ್ ಸೆಂಟರ್ ಸ್ಥಾಪನೆ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿ ಹಾಗೂ ಸಿಬ್ಬಂದಿಗಳು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು.  ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಟೆಸ್ಟ್ ಕಡ್ಡಾಯ ಮಾಡಲಾಗಿದೆ.
ಎಸ್ಸೆಸ್ಸೆಲ್ಸಿ ಫಲಿತಾಂಶದ ಬಗ್ಗೆ ಸಚಿವ ಸುರೇಶ್ ಕುಮಾರ್ ಹೇಳಿದ್ದಿಷ್ಟು
ಈ ಭಾರಿ ಒಟ್ಟು 8, 76, 581 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬಾಲಕರು 4,72,643, ಬಾಲಕಿಯರು 4,3,938,  7,83,955 ಫ್ರೆಶರ್ಸ್ ಪರೀಕ್ಷೆ ಬರೆಯಲಿದ್ದಾರೆ.
ಪುನಾವರ್ತಿತ ವಿದ್ಯಾರ್ಥಿಗಳು 977 ಇದ್ದು, ಖಾಸಗಿ ವಿದ್ಯಾರ್ಥಿಗಳು 21,817 ಇದ್ದಾರೆ.  ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು 9,419 ಇದ್ದಾರೆ. ರಾಜ್ಯದಲ್ಲಿ ಒಟ್ಟು 4,884 ಪರೀಕ್ಷಾ ಕೇಂದ್ರಗಳ ಸ್ಥಾಪನೆ ಮಾಡಲಾಗಿದೆ.
ಒಟ್ಟು 7366 ಪರೀಕ್ಷಾ ಕೊಠಡಿಗಳು ಇದ್ದು,  ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಎರಡು ದಿನಗಳ ಕಾಲ ನಡೆಯಲಿದ್ದು, SSLC ಈ ಭಾರಿ ಪರೀಕ್ಷೆ ವಿಧಾನದಲ್ಲಿ ಬದಲಾವಣೆ ಮಾಡಲಾಗಿದೆ.
KPSC ಮಾದರಿಯಲ್ಲಿ SSLC ಪರೀಕ್ಷೆ ನಡೆಯಲಿದ್ದು,  40 ಅಂಕಗಳಿಗೆ ನಡೆಯಲಿದೆ.  ಮೂರು ಗಂಟೆ ಅವಧಿಯಲ್ಲಿ ಮೂರು ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.
ಒಂದು ಕೊಠಡಿಯಲ್ಲಿ 10 ರಿಂದ 12 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವಿದ್ದು, ಇನ್ನು 1 ಲಕ್ಷದ 30 ಸಾವಿರ ಸಿಬ್ಬಂದಿಗಳನ್ನ ಪರೀಕ್ಷಾ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಬೆಳಿಗ್ಗೆ 9 ಗಂಟೆಗೆ ಹಾಜರಾಗುವುದು ಕಡ್ಡಾಯವಾಗಿದ್ದು, ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ಪರೀಕ್ಷೆ ನಡೆಯಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮುಂಬೈನಲ್ಲಿ ಭಾರೀ ಮಳೆ, ಭೂಕುಸಿತಕ್ಕೆ 20 ಬಲಿ!