Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : 2023-24ನೇ ಸಾಲಿನ ಬಜೆಟ್ಗೆ ಮುಹೂರ್ತ ಫಿಕ್ಸ್ ಆಗಿದೆ. ಫೆಬ್ರವರಿ 17 ರಂದು ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.
ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ದಿನಾಂಕ ನಿಗದಿ ಮಾಡಲಾಯ್ತು. ಕ್ಯಾಬಿನೆಟ್ ಬಳಿಕ ಸುದ್ದಿಗೋಷ್ಟಿ ನಡೆಸಿದ ಮಾಧುಸ್ವಾಮಿ ಅಧಿವೇಶನದ ಬಗ್ಗೆ ಮಾಹಿತಿ ನೀಡಿದರು.
ಚುನಾವಣೆ ವರ್ಷ ಅಗಿರುವುದರಿಂದ ಈ ಬಾರಿ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನವನ್ನ ಏಕಕಾಲದಲ್ಲಿ ನಡೆಸಲು ಸರ್ಕಾರ ನಿರ್ಧಾರ ಮಾಡಿದೆ ಎಂದು ತಿಳಿಸಿದರು.