ನವದೆಹಲಿ: ಬಹುಮತವಿಲ್ಲದಿದ್ದರೂ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ಕೊಟ್ಟಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಕೆಲವೇ ಕ್ಷಣಗಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ.
ಈಗಾಗಲೇ ಕೋರ್ಟ್ ಹಾಲ್ ಗೆ ನ್ಯಾಯಾಧೀಶರು, ಕಾಂಗ್ರೆಸ್ ಪರ ವಕೀಲರಾದ ಪಿ. ಚಿದಂಬರಂ, ಅಭಿಷೇಕ್ ಮನು ಸಿಂಘ್ವಿ ಆಗಮಿಸಿದ್ದಾರೆ.
ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿ ಬಿಜೆಪಿ ಸರ್ಕಾರ ಅಸ್ಥಿತ್ವದಲ್ಲಿರಬೇಕೋ ಬೇಡವೋ, ಅಥವಾ ವಿಶ್ವಾಸಮತ ಯಾಚನೆಗೆ ರಾಜ್ಯಪಾಲರು ನೀಡಿದ್ದ 15 ದಿನಗಳ ಕಾಲವಕಾಶ ಸರಿಯೇ ಎಂಬುದರ ಬಗ್ಗೆ ತೀರ್ಪು ನೀಡಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.