Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ರಾಯಚೂರು : ಇಂದು ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಪರೀಕ್ಷೆ ನಡೆಯುತ್ತಿರುವಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ನಲ್ಲಿ ವಾಟ್ಸಪ್, ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಪತ್ರಿಕೆ ಹರಿದಾಡುತ್ತಿದೆ. ಆದರೆ ಯಾರಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬುದು ತಿಳಿದುಬಂದಿಲ್ಲ.
ಹೀಗಾಗಿ ಈ ಕುರಿತು ಪೊಲೀಸರಿಗೆ ದೂರು ನೀಡುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೃಷಭೇಂದ್ರಯ್ಯ ಸ್ವಾಮಿ ಹೇಳಿದ್ದಾರೆ.
ಪ್ರಶ್ನೆ ಪತ್ರಿಕೆಗಳು ಪರೀಕ್ಷೆಗೂ ಮೊದಲೇ ಲೀಕ್ ಆಗಿಲ್ಲ. ಆದರೆ ಪರೀಕ್ಷೆಯ ಆರಂಭವಾದ ಬಳಿಕ ಯಾರೋ ಫೋಟೋ ತೆಗೆದಿರುವ ಸಾಧ್ಯತೆಯಿದೆ.