Webdunia - Bharat's app for daily news and videos

Install App

ಶಾಲಾ ಮಕ್ಕಳಿಗೆ ಆಕಾಶವಾಣಿಯಲ್ಲಿ ಪಠ್ಯ ಬೋಧನೆ

Webdunia
ಮಂಗಳವಾರ, 13 ಡಿಸೆಂಬರ್ 2022 (14:03 IST)
ಬೆಂಗಳೂರು : ಶಾಲಾ ಮಕ್ಕಳಿಗೆ ಆಕಾಶವಾಣಿ ಮೂಲಕ ಪಠ್ಯ ಬೋಧನೆಯ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯಲ್ಲಿ ವೇಳಾಪಟ್ಟಿಯನ್ನು ಪ್ರಕಟಗೊಳಿಸಿದೆ.

ಗುಣಾತ್ಮಕ ಶಿಕ್ಷಣದ ಗುರಿ ಸಾಧನೆಯೊಂದಿಗೆ ಡಿಜಿಟಲ್ ಉಪಕ್ರಮದ ಅಳವಡಿಕೆ ಹಾಗೂ ತರಗತಿ ಬೋಧನಾ ಕಲಿಕಾ ಪ್ರಕ್ರಿಯೆಯಲ್ಲಿ ಏಕತಾನತೆಯನ್ನು ಹೋಗಲಾಡಿಸುವ ಉದ್ದೇಶದಿಂದ ಆಕಾಶವಾಣಿಯ ಮೂಲಕ ಶಾಲೆಗಳಲ್ಲಿ ರೇಡಿಯೋ ಪಾಠವನ್ನು ಪ್ರಸಾರ ಮಾಡುತ್ತಿದೆ.

ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಪ್ರಕಟ ಮಾಡಿರುವ ವೇಳಾಪಟ್ಟಿಯಲ್ಲಿ ನಾಳೆಯಿಂದ ಫೆಬ್ರವರಿ 23ರವರೆಗೆ ಆಕಾಶವಾಣಿಯಲ್ಲಿ ನಿತ್ಯ ಪಠ್ಯ ಬೋಧನೆ ನಡೆಯಲಿದೆ.

1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗಾಗಿ ಪಠ್ಯ ಬೋಧನೆ ನಡೆಯಲಿದ್ದು, ಬಾನ್ ದನಿ ಕಾರ್ಯಕ್ರಮದ ಮೂಲಕ ಪಠ್ಯ ಬೋಧನೆ ಮಾಡಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಈ ಕಾರ್ಯಕ್ರಮವು ಆಕಾಶವಾಣಿಯಲ್ಲಿ ಸೋಮವಾರದಿಂದ ಗುರುವಾರದವರೆಗೆ ಮಧ್ಯಾಹ್ನ 2.35 ರಿಂದ 3,00 ಗಂಟೆಯವರೆಗೆ ಪ್ರಸಾರಗೊಳ್ಳಲಿದ್ದು, ರಾಜ್ಯದ 13 ಆಕಾಶವಾಣಿ ಕೇಂದ್ರಗಳು ಹಾಗೂ 3 ವಿವಿಧ ಭಾರತಿ ಈಒ ಕೇಂದ್ರಗಳಿಂದ ಏಕಕಾಲದಲ್ಲಿ ರೇಡಿಯೋ ಅಲ್ಲದೆ, ಸಾಮಾನ್ಯ ಮೊಬೈಲ್, All India Radio Bangalore You Tube streaming ನಲ್ಲಿ ಮತ್ತು ಜಗತ್ತಿನಾದ್ಯಂತ Prasarabharathi news on air app ನಲ್ಲಿಯೂ ಕೇಳಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments