ಬಿಹಾರ : ನಾಲ್ಕು ಜನ ದುಷ್ಕರ್ಮಿಗಳು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಯೊಬ್ಬಳನ್ನು ನಿರ್ಜನ ಪ್ರದೇಶಕ್ಕೆ ಎಳೆದ್ಯೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬಿಹಾರ್ ನಲ್ಲಿ ನಡೆದಿದೆ.
ಗುರುವಾರ ರಾತ್ರಿ 7 ಗಂಟೆಯ ವೇಳೆ ತನ್ನ ಸಂಬಂಧಿಕರ ಮನೆಗೆ ರೈಲಿನಲ್ಲಿ ತೆರಳುತ್ತಿದ್ದ ಬಾಲಕಿಯೊಬ್ಬಳನ್ನು ಹಿಂಬಾಲಿಸಿಕೊಂಡು ಬಂದ ಆಕೆಯ ಗ್ರಾಮದ ನಾಲ್ಕು ಜನ ಯುವಕರು ರೈಲು ನಿಂತಾಗ ಅಲ್ಲಿಂದ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದ್ಯೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ನಂತರ ಆಕೆಯನ್ನು ಸ್ಕೂಲ್ವೊಂದರ ಬಳಿ ಬಿಟ್ಟು, ಈ ವಿಷಯ ಯಾರಿಗೂ ತಿಳಿಸಬೇಡ. ಒಂದು ವೇಳೆ ತಿಳಿಸಿದ್ರೆ ನಿಮ್ಮ ಸಹೋದರನನ್ನು ಕೊಲ್ಲುವುದಾಗಿ ಬೆದರಿಕೆಯೊಡ್ಡಿದ್ದಾರೆ. ಆದ್ರೆ ಬಾಲಕಿ ನಡೆದಿದ್ದಲ್ಲವನ್ನು ಪೋಷಕರಿಗೆ ತಿಳಿಸಿದ್ದಾಳೆ. ಬಳಿಕ ಬಾಲಕಿ ಮತ್ತು ಪೋಷಕರು ಮಹಿಳಾ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಹುಡುಕಾಟದಲ್ಲಿ ತೊಡಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.