ಬೆಂಗಳೂರು : ಈಗಾಗಲೇ ರಾಜ್ಯ ವಿಧಾನಸಭಾ ಚುನಾವಣೆ ಮುಕ್ತಾಯಗೊಂಡಿದ್ದು, ಅದರ ಹಿಂದೆಯೇ ಇದೀಗ ಕೇಂದ್ರ ಚುನಾವಣಾ ಆಯೋಗವು ರಾಜ್ಯದ ಆರು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೊಷಣೆ ಮಾಡಿದೆ.
ಕರ್ನಾಟಕ ಆಗ್ನೇಯ ಶಿಕ್ಷಕರ ಮತಕ್ಷೇತ್ರ, ದಕ್ಷಿಣ ಶಿಕ್ಷಕರ ಮತಕ್ಷೇತ್ರ, ನೈಋತ್ಯ ಶಿಕ್ಷಕರ ಮತಕ್ಷೇತ್ರ, ನೈಋತ್ಯ ಪದವೀಧರ ಮತಕ್ಷೇತ್ರ, ಬೆಂಗಳೂರು ಪದವೀಧರ ಮತಕ್ಷೇತ್ರ ಹಾಗೂ ಈಶಾನ್ಯ ಪದವೀಧರ ಮತಕ್ಷೇತ್ರಗಳಿಗೆ ಜೂನ್ 8ರಂದು ಮತದಾನ ನಡೆಯಲಿರುವುದಾಗಿ ಕೇಂದ್ರ ಚುನಾವಣಾ ಆಯೋಗವು ತಿಳಿಸಿದೆ.
ಮೇ 22ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಮೇ 23ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮೇ 25ರೊಳಗೆ ವಾಪಸ್ ಪಡೆಯಬಹುದು. ಜೂನ್ 8ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಜೂನ್ 12ರಂದು ಮತ ಎಣಿಕೆ ನಡೆಯಲಿದೆ. ಜೂನ್ 15ರೊಳಗೆ ಚುನಾವಣೆಯ ಸಂಪೂರ್ಣ ಪ್ರಕ್ರಿಯೆ ಕೊನೆಗೊಳ್ಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ