ನವದೆಹಲಿ: ಒಡಿಶಾ, ಆಂಧ‍್ರಪ್ರದೇಶ ಕರಾವಳಿಗೆ ತಿತ್ಲಿ ಚಂಡಮಾರುತ ಅಪ್ಪಳಿಸಿದ್ದು, ಲಕ್ಷಾಂತರ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಗಂಟೆಗೆ 140 ರಿಂದ 150 ಕಿ.ಮೀ. ವೇಗದಲ್ಲಿ ಚಂಡಮಾರುತ ಬೀಸುತ್ತಿದೆ. ಮುಂದಿನ ಎರಡು ಗಂಟೆಯೊಳಗೆ ಒಡಿಶಾ ಕರಾವಳಿಯಲ್ಲಿ ಚಂಡಮಾರುತ ತೀವ್ರಗೊಳ್ಳಲಿದೆ. ಬಂಗಾಲ ಕೊಲ್ಲಿ ಮಹಾಸಾಗರದಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಹವಾಮಾನದಲ್ಲಿ ಏರುಪೇರಾಗಿದೆ.
ಭೂಕುಸಿತದ ಪ್ರಕರಣಗಳು ಹೆಚ್ಚಾಗಿರುವ ಹಿನ್ನಲೆಯಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಮಧ್ಯಾಹ್ನದ ಬಳಿಕ ಗಾಳಿಯ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.