ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವುದರೊಂದಿಗೆ ಬಜೆಟ್ ಅಧಿವೇಶನ ಆರಂಭವಾಗಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ತಮ್ಮ ನಾಲ್ಕನೇ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಕೋವಿಡ್ -19 ಸಾಂಕ್ರಾಮಿಕದ ಮೂರನೇ ಅಲೆ ಮಧ್ಯೆ ಈ ವರ್ಷದ ಬಜೆಟ್ ಮಹತ್ವದ್ದಾಗಿದೆ.
ಫೆ.1ರಂದು ಬೆಳಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ 2022-23ನೇ ಸಾಲಿನ ಬಜೆಟ್ ಅಧಿವೇಶನ ಮಂಡನೆ ಮಾಡಲಿದ್ದಾರೆ. ಹೀಗಾಗಿ ಈ ಎರಡೂ ದಿನಗಳ ಕಾಲ ಪ್ರಶ್ನೋತ್ತರ ಮತ್ತು ಶೂನ್ಯ ಅವಧಿ ಇರುವುದಿಲ್ಲ. ರಾಷ್ಟ್ರಪತಿ ಅವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ಮೋದಿ ಅವರು ಫೆ.7ರಂದು ಉತ್ತರಿಸುವ ಸಾಧ್ಯತೆಯಿದೆ ಎನ್ನಲಾಗಿದೆ.