ಬೆಂಗಳೂರು : ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಹೊಸ ಸರ್ಕಾರ ಇಂದಿನಿಂದ ಪ್ರಾರಂಭವಾಗಲಿದ್ದು, ಈ ಸಂದರ್ಭದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಆಗಿ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿಯಾಗಿ ಜಿ.ಪರಮೇಶ್ವರ್ ಬುಧವಾರ (ಇಂದು) ಸಂಜೆ ವಿಧಾನಸೌಧದ ಎದುರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇಂದು ನಡೆಯುವ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿರುವ ಬಿಎಸ್ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಸೇರಿ ಹಲವು ಗಣ್ಯರು ಆಗಮಿಸಲಿದ್ದಾರೆ. ಒಟ್ಟಾರೆ ಮೈತ್ರಿ ಸರ್ಕಾರದ ರಚನೆ ವೇಳೆ ಸರಿ ಸುಮಾರು 2 ಲಕ್ಷ ಜನರು ಸೇರುವ ನಿರೀಕ್ಷೆ ಇದ್ದು, ಕಾರ್ಯಕ್ರಮಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ. ಸಂಜೆ 4 ಗಂಟೆ ಕಾರ್ಯಕ್ರಮ ಆರಂಭವಾಗಲಿದ್ದು, ಅಮೃತಸಿದ್ಧಿಯೋಗ ಕಾಲದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆಂದು ತಿಳಿದು ಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ