ಪಂಜಾಬ್ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ.
ಫಲಿತಾಂಶಕ್ಕೂ ಮುನ್ನವೇ ಗೆಲುವಿನ ನಿರೀಕ್ಷೆಯಲ್ಲಿರುವ ಜನ ನಾಯಕರು ಈಗಾಗಲೇ ಸಂಭ್ರಮಾಚರಣೆಗೆ ಸಿದ್ಧತೆಯಲ್ಲಿ ತೊಡಗಿದ್ದಾರೆ.
ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಂದ 'ಮೋತಿಚೂರು ಲಡ್ಡೂ' ಹಾಗೂ ಇತರೆ ಸಿಹಿತಿಂಡಿಗಳಿಗೆ ದೊಡ್ಡ ಪ್ರಮಾಣದಲ್ಲಿ ಆರ್ಡರ್ಗಳು ಬರುತ್ತಿರುವುದರಿಂದ ನಗರದ ಕೆಲ ಸಿಹಿತಿಂಡಿ ಅಂಗಡಿಗಳ ಮಾಲೀಕರಿಗೆ ಲಾಟರಿ ಹೊಡೆದಂತಾಗಿದೆ.
ಚುನಾವಣಾ ಫಲಿತಾಂಶಕ್ಕೂ ಮೊದಲು ತಮಗೆ ಈಗಾಗಲೇ ಅನೇಕ ಆರ್ಡರ್ಗಳು ಬಂದಿವೆ, ಇತ್ತ ಸೋಮವಾರ ಮುಕ್ತಾಯಗೊಂಡ ಪಂಚರಾಜ್ಯ ಚುನಾವಣೆಗಳ ಫಲಿತಾಂಶ ಏನಾಗಬಹುದು ಎಂಬ ಕುತೂಹಲದ ಮಧ್ಯೆಯೇ ಪ್ರಕಟವಾಗಿರುವ ಚುನಾವಣೋತ್ತರ ಸಮೀಕ್ಷೆಗಳು ಉತ್ತರ ಪ್ರದೇಶದಲ್ಲಿ ಬಿಜೆಪಿ ದಾಖಲೆಯ 2ನೇ ಬಾರಿ ಅಧಿಕಾರಕ್ಕೆ ಬರಲಿದೆ ಎಂಬ ಸ್ಪಷ್ಟ ಭವಿಷ್ಯ ನುಡಿದಿವೆ.
ಇದೇ ವೇಳೆ, ಪಂಜಾಬ್ನಲ್ಲಿ ಇದೇ ಮೊದಲ ಬಾರಿ ಕಾಂಗ್ರೆಸ್ ಹಾಗೂ ಅಕಾಲಿದಳದ ಹೊರತಾದ ಪಕ್ಷವೊಂದು ಉದಯಿಸಲಿದ್ದು, ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಜಯ ಸಾಧಿಸಿ ಅಧಿಕಾರಕ್ಕೇರಲಿದೆ, ಎಎಪಿ ದಿಲ್ಲಿ ಹೊರಗೆ ಮೊದಲ ಬಾರಿ ಅಧಿಕಾರಕ್ಕೆ ಬಂದು ತನ್ನ ವ್ಯಾಪ್ತಿ ವಿಸ್ತರಿಸಿಕೊಳ್ಳಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.