Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧ!

ಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧ!
ಚಾಮರಾಜನಗರ , ಗುರುವಾರ, 10 ಫೆಬ್ರವರಿ 2022 (11:43 IST)
ಚಾಮರಾಜನಗರ : ಇಂದಿನಿಂದ ಚಾಮರಾಜನಗರ-ತಮಿಳುನಾಡು ಗಡಿ ಭಾಗ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ರಾತ್ರಿ ವೇಳೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
 
ತಮಿಳುನಾಡಿನ ಸತ್ಯಮಂಗಲ ಹುಲಿಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗಿರುವ ಹೆದ್ದಾರಿ ಇದಾಗಿದೆ. ಜಿಲ್ಲೆಯ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಸತ್ಯಮಂಗಲಂ ಹುಲಿಸಂರಕ್ಷಿತ ಪ್ರದೇಶ.

ಮದ್ರಾಸ್ ಹೈಕೋರ್ಟ್ ನಿರ್ದೇಶನಕ್ಕೆ ಕರ್ನಾಟಕದ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. 

ಇಂದು ಜಿಲ್ಲೆಯ ಗಡಿ ಭಾಗದ ಪುಣಜನೂರು ಚೆಕ್‌ಪೋಸ್ಟ್‌ನಲ್ಲಿ ರೈತರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ರಾತ್ರಿ ಸಂಚಾರ ನಿರ್ಬಂಧದಿಂದ ತರಕಾರಿ ಸಾಗಾಣಿಕೆಗೆ ತೊಂದರೆಯಾಗುವ ಹಿನ್ನೆಲೆ, ಚಾಮರಾಜನಗರ ಜಿಲ್ಲಾ ರೈತಸಂಘವು ಪ್ರತಿಭಟನೆ ನಡೆಸಲು ಮುಂದಾಗಿದೆ. 

 
ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾಡಳಿತವು ಕರ್ನಾಟಕದ ಗಡಿಭಾಗದಲ್ಲಿ ವಾಹನಗಳನ್ನು ಎಲ್ಲಿ ನಿಲುಗಡೆ ಮಾಡಬೇಕೆಂಬ ಗೊಂದಲದಲ್ಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಶಾಂತಿಗೆ ಭಂಗ ತರುವ ಕೆಲಸವಾಗದಿರಲಿ: ಬೊಮ್ಮಾಯಿ