Publish Date: Wed, 05 Apr 2023 (06:50 IST)
Updated Date: Wed, 05 Apr 2023 (09:38 IST)
ಬೆಂಗಳೂರು : ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೋಮವಾರ ರಾತ್ರಿ ನಗರದ ಹಲವೆಡೆ ಮಳೆರಾಯ ತಂಪೆರೆದಿದ್ದು, ಇಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಮೈಸೂರು, ಬೆಂಗಳೂರು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೇ ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.