Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : 2022-23ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳಿಗೆ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ.
ರಾಜ್ಯದ ಎಲ್ಲಾ ವಿ.ವಿ.ಗಳು ಮತ್ತು ಕಾಲೇಜುಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಏಕರೂಪದ ಕಾರ್ಯಕ್ರಮ ಪಟ್ಟಿಯಂತೆ, ರಾಜ್ಯದ ಉದ್ದಗಲಕ್ಕೂ ಪದವಿ ತರಗತಿಗಳಿಗೆ ಜುಲೈ 11ರಿಂದ ಪ್ರವೇಶಾತಿ ಆರಂಭವಾಗಲಿದ್ದು, ಆಗಸ್ಟ್ 17ರಿಂದ 22ರ ನಡುವೆ ತರಗತಿಗಳು ಆರಂಭವಾಗಲಿವೆ.
ಇದೇ ರೀತಿಯಲ್ಲಿ ಸ್ನಾತಕೋತ್ತರ ಕೋರ್ಸ್ಗಳಿಗೆ ಅಕ್ಟೋಬರ್ 15ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 2ರಿಂದ 14ರ ನಡುವೆ ತರಗತಿಗಳಿಗೆ ಚಾಲನೆ ಸಿಗಲಿದೆ ಎಂದಿದ್ದಾರೆ.
ಇದುವರೆಗೂ ರಾಜ್ಯದಲ್ಲಿ ಒಂದೊಂದು ವಿ.ವಿ.ಯೂ ತಮ್ಮ ಅನುಕೂಲಕ್ಕೆ ತಕ್ಕಂತೆ ಶೈಕ್ಷಣಿಕ ವೇಳಾಪಟ್ಟಿ ರೂಪಿಸಿಕೊಳ್ಳುತ್ತಿದ್ದವು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಗೊಂದಲ ಮತ್ತು ಅನನುಕೂಲ ಆಗುತ್ತಿತ್ತು. ಇದನ್ನು ಗಮನಿಸಿ ಈ ಏಕರೂಪದ ವೇಳಾಪಟ್ಟಿಯನ್ನು ತರಲಾಗಿದೆ ಎಂದು ಅವರು ಹೇಳಿದ್ದಾರೆ.