Publish Date: Sat, 30 Oct 2021 (08:18 IST)
Updated Date: Sat, 30 Oct 2021 (08:22 IST)
ಬೆಂಗಳೂರು : ಖ್ಯಾತ ನಟ ಪುನೀತ್ ರಾಜ್ಕುಮಾರ್ ನಿಧನದ ಹಿನ್ನೆಲೆಯಲ್ಲಿ ಕೆಲ ಖಾಸಗಿ ಶಾಲೆಗಳು ಶನಿವಾರ ರಜೆ ಘೋಷಿಸಿವೆ.
ಈ ಕುರಿತು ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಪ್ರಕಟಣೆ ಹೊರಡಿಸಿದೆ. ಆದರೆ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ.